NEWSದೇಶ-ವಿದೇಶರಾಜಕೀಯ

ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು: ಖಾದ್ಯತೈಲ ಬೆಲೆಯಲ್ಲಿ ಇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಕೃಷಿ ಸೆಸ್ ಪ್ರಮಾಣವನ್ನು ಕಡಿತ ಮಾಡಿದೆ.

2022ರ ಮಾರ್ಚ್ 31ರವರೆಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಕೃಷಿ ಸೆಸ್ ಅನ್ನು ಕಡಿತಗೊಳಿಸಿರುವ ಕ್ರಮವು ಹಬ್ಬದ ಸೀಸನ್ ನಲ್ಲಿ ಬೆಲೆಗಳನ್ನು ತಗ್ಗಿಸಲು ಮತ್ತು ದೇಶೀಯ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಸುಂಕ ಕಡಿತವು ಅಕ್ಟೋಬರ್ 14ರಿಂದ ಜಾರಿಗೆ ಬರಲಿದ್ದು, ಮಾರ್ಚ್ 31, 2022 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪರೋಕ್ಷ ತೆರಿಗೆಮತ್ತು ಕೇಂದ್ರೀಯ ಕಸ್ಟಮ್ಸ್ ಮಂಡಳಿ(ಸಿಬಿಐಸಿ) ಅಧಿಸೂಚನೆಯಲ್ಲಿ ತಿಳಿಸಿದೆ.

ಕಚ್ಚಾ ತಾಳೆ ಎಣ್ಣೆ ಮೇಲಿನ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್(ಎಐಡಿಸಿ) ಈಗ ಶೇಕಡ 7.5ರಷ್ಟಾಗಿದೆ. ಜೊತೆಗೆ ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ದರವು ಶೇಕಡ 5ರಷ್ಟಾಗಿದೆ.

ಕಡಿತದ ನಂತರ, ತಾಳೆ, ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ವಿಧಗಳ ಮೇಲೆ ಪರಿಣಾಮಕಾರಿ ಕಸ್ಟಮ್ಸ್ ಸುಂಕ ಕ್ರಮವಾಗಿ ಶೇ .8.25, ಶೇ .5.5 ಮತ್ತು ಶೇ .5.5 ಆಗಿರುತ್ತದೆ.

ಇದಲ್ಲದೆ, ಸಂಸ್ಕರಿಸಿದ ಸೂರ್ಯಕಾಂತಿ, ಸೋಯಾಬೀನ್, ಪಾಮೋಲಿನ್ ಮತ್ತು ತಾಳೆ ಎಣ್ಣೆಯ ಮೂಲ ಕಸ್ಟಮ್ಸ್ ಸುಂಕವನ್ನು ಪ್ರಸ್ತುತ ಶೇಖಡ 32.5ರಿಂದ 17.5ಕ್ಕೆ ತಗ್ಗಿಸಲಾಗಿದೆ.

ಹೀಗಾಗಿ ಇಂದಿನಿಂದಲೇ (ಅ.14) ಎಲ್ಲ ಖಾದ್ಯ ತೈಲ ಬೆಲೆಯಲ್ಲೂ ಇಳಿಕೆಯಾಗಲಿದೆ. ಇದು ಮಾರ್ಚ್‌ 2022ರವರೆಗೂ ಮುಂದುವರಿಯಲಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?