NEWSದೇಶ-ವಿದೇಶರಾಜಕೀಯ

ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಬೇಕು: ಪ್ರಧಾನಿ ನರೇಂದ್ರ ಮೋದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಸಿಡ್ನಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಿಡ್ನಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಸಿಡ್ನಿ ಡೈಲಾಗ್‍ನಲ್ಲಿ ಭಾಷಣ ಮಾಡಿದ ಮೋದಿ ಅವರು, ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವುದು ಅತ್ಯಗತ್ಯ. ರಾಷ್ಟ್ರೀಯ ಹಕ್ಕುಗಳನ್ನು ಗುರುತಿಸುವ ಮೂಲಕ ವ್ಯಾಪಾರ, ಹೂಡಿಕೆ ಮತ್ತು ದೊಡ್ಡ ಸಾರ್ವಜನಿಕ ಒಳಿತನ್ನು ಉತ್ತೇಜಿಸಬೇಕು ಎಂದು ಹೇಳಿದರು.

ಈ ವೇಳೆ ಉದಾಹರಣೆ ಕೊಟ್ಟ ಅವರು, ಕ್ರಿಪ್ಟೋ-ಕರೆನ್ಸಿ ವಿಚಾರದಲ್ಲಿ ಎಲ್ಲ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು. ಅಲ್ಲಿ ತಪ್ಪು ಆಗದಂತೆ ನೋಡಿಕೊಳ್ಳುವುದು ಮುಖ್ಯ ಎಂದು ತಿಳಿಸಿದರು.

ಭಾರತದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಮತ್ತು ಕ್ರಾಂತಿ ಬಗ್ಗೆಯೂ ಮಾತನಾಡಿ, ದೇಶವು ಪ್ರಸ್ತುತ ಐದು ಪ್ರಮುಖ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ. ಅವುಗಳೇ ಸಬಲೀಕರಣ, ಸಂಪರ್ಕ, ಪ್ರಯೋಜನಗಳ ವಿತರಣೆ ಮತ್ತು ಕಲ್ಯಾಣ ಸೇರಿದಂತೆ ಆಡಳಿತದಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ ಎಂದರು.

ತಂತ್ರಜ್ಞಾನ ಅಭಿವೃದ್ಧಿ ಮತ್ತು ಕ್ರಾಂತಿ ಮೂಲಕ ಜನರ ಜೀವನದ ಪರಿವರ್ತಿನೆಯಲ್ಲಿ ಭಾರತದ ಪ್ರಯತ್ನಗಳ ಸಫಲವಾಗುತ್ತಿವೆ ಎಂದು ಹೇಳಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಎಂಬುದು ಬಹುದೊಡ್ಡ ಸಾಧನವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ವ್ಯವಸ್ಥೆಗಳಿಗೆ ಭವಿಷ್ಯದಲ್ಲಿ ರೂಪಕೊಡಲು ಅತ್ಯಂತ ಮುಖ್ಯ ಅಂಶವಾಗಿದೆ. ಟೆಕ್ನಾಲಜಿ ಮತ್ತು ಡಾಟಾ (ತಂತ್ರಜ್ಞಾನ ಮತ್ತು ದತ್ತಾಂಶ) ಗಳು ಬರಬರುತ್ತಾ ಎಲ್ಲ ಕ್ಷೇತ್ರಗಳಲ್ಲೂ ಮುಖ್ಯ ಅಸ್ತ್ರಗಳಾಗುತ್ತಿವೆ ಎಂದು ವಿವರಿಸಿದರು.

ಇನ್ನು ಈ ತಂತ್ರಜ್ಞಾನ ಮತ್ತು ದತ್ತಾಂಶಕ್ಕೆ ಮುಕ್ತವಾಗಿ ನಾವು ತೆರೆದುಕೊಳ್ಳುತ್ತಿದ್ದೇವೆ. ಪ್ರಜಾಪ್ರಭುತ್ವದ ದೊಡ್ಡ ಬಲವೆಂದರೆ ಅದು ಮುಕ್ತತೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಈ ಮುಕ್ತತೆಯನ್ನು ದುರುಪಯೋಗಪಡಿಸಿಕೊಳ್ಳಲು ಬಿಡಬಾರದು ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ