Please assign a menu to the primary menu location under menu

NEWSದೇಶ-ವಿದೇಶ

18ನೇ ದಿನಕ್ಕೆ ಕಾಲಿಟ್ಟ ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಎಂಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 18ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಭಾನುವಾರ 1,746 ಪ್ರಯಾಣಿಕರು ಸಾರಿಗೆ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ 79 ಬಸ್‌ಗಳು ಭಾನುವಾರ ರಸ್ತೆಗಿಳಿದ್ದು, ಅವುಗಳಲ್ಲಿ ನಾಸಿಕ್-ಪುಣೆ ಮಾರ್ಗದಲ್ಲಿ ಎರಡು ಬಸ್‌ಗಳು 84 ಪ್ರಯಾಣಿಕರ ಪೂರ್ಣ ಸಾಮರ್ಥ್ಯದಲ್ಲಿ ಓಡಾಡಿವೆ. ಒಟ್ಟು 92,266 ನೌಕರರಿರುವ ಸಂಸ್ಥೆಯಲ್ಲಿ 3,987 ನೌಕರರು ಮುಷ್ಕರದಿಂದ ಹಿಂದೆ ಸರಿದು ಕೆಲಸ ಪುನರಾರಂಭಿಸಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆಗಿಳಿದಿರುವ ಹೆಚ್ಚಿನ ಬಸ್‌ಗಳು ಪುಣೆ-ಮುಂಬೈ, ಸಾಂಗ್ಲಿ-ಪುಣೆ, ನಾಸಿಕ್-ಧುಲೆ ಮತ್ತು ಮೀರಜ್-ಪಂಢರಪುರದಂತಹ ಅಂತರ-ನಗರ ಮಾರ್ಗಗಳಲ್ಲಿ ಕಾರ್ಯಾಚರಿಸುತ್ತಿವೆ. ಇತರ ಮಾರ್ಗಗಳಿಗೆ, ನಾಗರಿಕರು ಇನ್ನೂ ಖಾಸಗಿ ಬಸ್ ಸೇವೆಗಳ ಮೇಲೆ ಅವಲಂಬಿತರಾಗಿದ್ದಾರೆ. ಅವರನ್ನು ಸಹ MSRTC ಬಸ್‌ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಸರ್ಕಾರವು ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

“ಆದರೆ ಖಾಸಗಿ ಬಸ್ ನಿರ್ವಾಹಕರು ನಗರ ಕೇಂದ್ರಗಳು ಮತ್ತು ಪಟ್ಟಣಗಳು, ಮುಖ್ಯ ಕೇಂದ್ರ ಬಸ್ ನಿಲ್ದಾಣಗಳಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಗ್ರಾಮೀಣ ಭಾಗಕ್ಕೆ ತೆರಳುತ್ತಿದ್ದಾರೆ. ಇನ್ನು ಸ್ವಲ್ಪ ಹೆಚ್ಚುವರಿ ಪಾವತಿಸಿದರೂ ಗ್ರಾಮೀಣ ಪ್ರದೇಶಗಳಿಗೆ ಈ ಸಾರಿಗೆ ಬಸ್‌ಗಳು ಬರುತ್ತಿರಲಿಲ್ಲ. ಇದರಿಂದ ಈ ಹಿಂದಿನಿಂದಲೂ ಪ್ರಯಾಣಿಕರು ಆಟೊ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್‌ಗಳನ್ನು ಶೇರ್‌ ಮಾಡಿಕೊಂಡು ಪ್ರಯಾಣಿಸುವ ಮುಳಕ ಈ ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಮುಷ್ಕರ ನಿರತ ಎಂಎಸ್‌ಆರ್‌ಟಿಸಿ ನೌಕರರ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿ ಭಾನುವಾರ ಬೆಳಗ್ಗೆ ಮಂತ್ರಾಲಯದ ಹೊರಗೆ ಕಾರ್ಯಕರ್ತರ ಗುಂಪು ಘೋಷಣೆಗಳನ್ನು ಕೂಗಿತು. ನಂತರ ಮುಷ್ಕರ ನಿರತರಲ್ಲಿ ಇಬ್ಬರು ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದರು, ಆಗ ಸ್ಥಳದಲ್ಲಿದ್ದ ಪೊಲೀಸರು ಕ್ಷಿಪ್ರವಾಗಿ ತೆರಳಿ ತಡೆಯುವ ಮೂಲಕ ಭಾರಿ ಅನಾಹುತವನ್ನು ತಪ್ಪಿಸಿದರು.

ನವೆಂಬರ್ 14 ರಂದು ಪಾಲ್ಘರ್‌ನ ಜವಾಹರ್ ಡಿಪೋದಲ್ಲಿ ಖಿನ್ನತೆಗೆ ಒಳಗಾದ ಎಂಎಸ್‌ಆರ್‌ಟಿಸಿ ಬಸ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಅವರನ್ನು ಅವರ ಕುಟುಂಬ ಸದಸ್ಯರು ರಕ್ಷಿಸಿದ್ದಾರೆ.

ನಿಗಮವನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಅಕ್ಟೋಬರ್ 28 ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ, ಆದರೆ ದೀಪಾವಳಿ ಹಬ್ಬ ಮುಗಿದ ನಂತರ ಅವರು ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಸರ್ಕಾರ ವಿಲೀನಗೊಳಿಸಿದರೆ MSRTC ಸಿಬ್ಬಂದಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸಮಾನವಾದ ಸ್ಥಾನಮಾನ ಸಿಗಲಿದೆ.

ಪ್ರತಿಭಟನೆಯಲ್ಲಿ ಮಹಿಳಾ ನೌಕರರು ಭಾಗವಹಿಸಿದ್ದು ಮುಷ್ಕರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ