NEWSದೇಶ-ವಿದೇಶನಮ್ಮರಾಜ್ಯ

ದೇಶ ತೊರೆದಿದ್ದ ಓಮಿಕ್ರಾನ್ ಸೋಂಕಿತ ಆಫ್ರಿಕಾ ಪ್ರಜೆ, ಶಾಂಗ್ರಿ-ಲಾ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕಿದ್ದರೂ ಆಫ್ರಿಕಾ ಪ್ರಜೆ ದೇಶ ತೊರೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೋಟೆಲ್‌ ಶಾಂಗ್ರಿ-ಲಾ ಆಡಳಿತ ಮಂಡಳಿ ಮತ್ತು ಆಫ್ರಿಕಾ ಪ್ರಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ.ನವೀನ್ ದೂರು ಸಲ್ಲಿಸಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 269, 271, 114 ಹಾಗೂ ಕರ್ನಾಟಕ ಎಪಿಡೆಮಿಕ್ ಡಿಸಿಸ್ ಆ್ಯಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ.

ನವೆಂಬರ್ 20ರಂದು ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಪ್ರಜೆಯನ್ನು ಏರ್​ಪೋರ್ಟ್​ನಲ್ಲಿ​ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಶಾಂಗ್ರಿಲಾ ಹೊಟೇಲ್​ನಲ್ಲಿ 14 ದಿನಗಳ ಕ್ವಾರಂಟೈನ್ ಮಾಡಲಾಗಿತ್ತು.

ಆದರೆ ನವೆಂಬರ್ 27ಕ್ಕೆ ಹೋಟೆಲ್ ತೊರೆದು ದೇಶ ಬಿಟ್ಟು ಪರಾರಿಯಾಗಿದ್ದಾನೆ. ಆದರೆ ಈ ಬಗ್ಗೆ ಶಾಂಗ್ರಿ-ಲಾ ಹೋಟೆಲ್ ಆಡಳಿತ ಮಂಡಳಿ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ.

ಬಿಬಿಎಂಪಿ ನೋಟಿಸ್: ಓಮಿಕ್ರಾನ್ ಸೋಂಕಿತ ವಿದೇಶಕ್ಕೆ ಹೇಗೆ ಎಸ್ಕೇಪ್ ಆದ? ಹೋಟೆಲ್ ಸಿಬ್ಬಂದಿ ಯಾವ ಕಾರಣಕ್ಕೆ ಹೊರಗೆ ಕಳಿಸಿದರು? ಜಿನೋಮಿಕ್ ಸೀಕ್ವೆನ್ಸ್​ಗೂ ಮೊದಲೇ ಹೇಗೆ ಹೊರಗೆ ಬಿಟ್ರಿ? ಯಾವ ಕಾರಣಕ್ಕೆ ಆತನನ್ನು ಕ್ವಾರಂಟೈನ್ ಮಾಡಿಲ್ಲ? ಕಾರಣ ಹೇಳಿ ಸ್ಪಷ್ಟನೆ ನೀಡುವಂತೆ ಬಿಬಿಎಂಪಿ ಹೋಟೆಲ್ ಮಾಲೀಕರಿಗೆ ನೋಟಿಸ್​ ನೀಡಿತ್ತು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ