Please assign a menu to the primary menu location under menu

CrimeNEWSದೇಶ-ವಿದೇಶ

ಅಪಹರಣಗೊಂಡ  ಬಾಲಕಿ ರಕ್ಷಿಸಲು ಹೋದ ಮೂವರು ಪೊಲೀಸರು ಸೇರಿ ಐವರು ಮೃತ

ವಿಜಯಪಥ ಸಮಗ್ರ ಸುದ್ದಿ

ಭೋಪಾಲ್: ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಲು ಕಾರಿನಲ್ಲಿ ಹರಿಯಾಣಕ್ಕೆ ತೆರಳುತ್ತಿದ್ದ ಮೂವರು ಪೊಲೀಸರು ಸೇರಿ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾ ಸಮೀಪದ ಯುಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ಪೊಲೀಸರು ಮಧ್ಯ ಪ್ರದೇಶದ ಟಿಕಾಮ್‌ಗಡದ ಬುದೇರಾ ಪೊಲೀಸ್ ಠಾಣೆಯವರು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಹೆಡ್‌ಕಾನ್ಸ್ಟೇಬಲ್ ಸೇರಿದಂತೆ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಮಥುರಾದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಡ್‌ಕಾನ್ಸ್ಟೇಬಲ್ ರಥಿ ರಾಮ್, ಕಾರು ಚಾಲಕ ಜಗದೀಶ್‌ ಲೋಧಿ ಮತ್ತು ರವಿ ರಾಯ್‌ಕರ್‌ ಗಾಯಾಗೊಂಡವರು.

ಪೊಲೀಸರ ತಂಡ ಹರಿಯಾಣಕ್ಕೆ ತೆರಳುತ್ತಿದ್ದ ವೇಳೆ ಟಿಕಾಮ್‌ಗಡದ ಸಮೀಪ ರಸ್ತೆ ವಿಭಜಕಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಹೆಡ್‌ಕಾನ್ಸ್ಟೇಬಲ್‌ಗಳಾದ ಭವಾನಿ ಪ್ರಸಾದ್ (52), ಹೀರಾ ದೇವಿ ಪ್ರಜಾಪತಿ (32), ಕಮಲೇಂದ್ರ ಯಾದವ್ (28) ಎಂಬುವರು ಮೃತಪಟ್ಟಿದ್ದಾರೆ ಎಂದು ಟಿಕಾಮ್‌ಗಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಲ್. ಚೌರಾಸಿಯಾ ತಿಳಿಸಿದ್ದಾರೆ.

ಟಿಕಾಮ್‌ಗಡದಿಂದ ಅಪಹರಣಕ್ಕೊಳಗಾದ ಬಾಲಕಿಯ ರಕ್ಷಣಾ ಕಾರ್ಯಕ್ಕೆ ನೆರವಾಗಲೆಂದು ಉತ್ತರ ಪ್ರದೇಶದಿಂದ ಕರೆತಂದಿದ್ದ ಪ್ರೀತಿ ಮತ್ತು ಧರ್ಮೇಂದ್ರ ಎಂಬುವವರು ಕೂಡ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ