NEWSದೇಶ-ವಿದೇಶನಮ್ಮರಾಜ್ಯ

ಕನ್ನಡ ರಾಜ್ಯೋತ್ಸವ ಹತ್ತಿರ ಬರುತ್ತಿದ್ದಂತೆ ಎಂಇಎಸ್‌ ಪುಂಡಾಟಿಕೆ ಶುರು: ಮಾಜಿ ಸಿಎಂ ಎಚ್‌ಡಿಕೆ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆಯ ಪ್ರಚಾರದಲ್ಲಿ ಬಿಸಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕನ್ನಡ ವಿರುದ್ಧ ನಡೆಯನ್ನು ಅನುಸರಿಸುತ್ತಿರುವ ಎಂಇಎಸ್ (MES) ವಿರುದ್ಧ ಕಿಡಿಕಾರಿದ್ದಾರೆ.

ಬುಧವಾರ ಬೆಳಗ್ಗೆ ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಎಂಇಎಸ್ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ, ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ.

ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ ಎಂದಿದ್ದಾರೆ.

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್ , ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ ಎಂದು ಕಿಡಿಕಾರಿದರು.

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ