NEWSಆರೋಗ್ಯ

ಮಕ್ಕಳು, ಮಹಿಳೆಯರಲ್ಲಿರುವ ಅಪೌಷ್ಟಿ ಕತೆ ನಿವಾರಣೆಗೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಇರುವ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಮಂಗಳವಾರ ಪ್ರ ಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಕಲಬುರ್ಗಿ, ರಾಯಚೂರು, ಯಾದಗಿರಿ ಲ ಜಿಲ್ಲೆ ಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿ ಕತೆಯ ಸಮಸ್ಯೆ ಜಾಸ್ತಿ ಇರುವುದು ಕಂಡುಬಂದಿದೆ. ಅದನ್ನು ನಿವಾರಿಸಲು ವಿಶೇಷ ಯೋಜನೆಯೊಂದನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಪ್ರ ಗತಿ ಪರಿಶೀಲನೆಮಾಡಲಾಗುವುದು. ಕಾಲಮಿತಿಯೊಳಗೆಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳು ವಂತೆಸೂಚಿಸಲಾಗಿದೆ ಎಂದು ತಿಳಿಸಿದರು.

ಬಜೆಟ್‌ ಹಂಚಿಕೆಯ ಅನುಸಾರ ಬಿಡುಗಡೆಮಾಡಿರುವ ಅನುದಾನವನ್ನು ಎಂಟು ಇಲಾಖೆಗಳು ಪೂರ್ಣವಾಗಿ ಇನ್ನೂ ಬಳಕೆಮಾಡಿಲ್ಲ . ಕೆಲವು ತಾಂತ್ರಿ ಕ ಕಾರಣಗಳಿಂದ ಅನುದಾನದ ಬಳಕೆಯಲ್ಲಿ ವಿಳಂಬವಾಗಿದೆ. ಎಲ್ಲ ಸಮಸ್ಯೆ ಗಳನ್ನು ಪರಿಹರಿಸಿ ತ್ವರಿತವಾಗಿ ಅನುದಾನ ಬಳಕೆಗೆ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ಹೇಳಿದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರ ಕರಣಗಳ ತ್ವರಿತ ಇತ್ಯರ್ಥಕ್ಕೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನಪರವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತೆಯೂ ನಿರ್ದೇಶನ ನೀಡಲಾಗಿದೆ ಎಂದರು.

ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಜಾರಿಗೆ ಸಲಹಾ ಸಮಿತಿ ರಚಿಸಲಾಗುವುದು. ನವೆಂಬರ್ 1ರಿಂದ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ