ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಇರುವ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಮಂಗಳವಾರ ಪ್ರ ಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಕಲಬುರ್ಗಿ, ರಾಯಚೂರು, ಯಾದಗಿರಿ ಲ ಜಿಲ್ಲೆ ಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿ ಕತೆಯ ಸಮಸ್ಯೆ ಜಾಸ್ತಿ ಇರುವುದು ಕಂಡುಬಂದಿದೆ. ಅದನ್ನು ನಿವಾರಿಸಲು ವಿಶೇಷ ಯೋಜನೆಯೊಂದನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಪ್ರ ಗತಿ ಪರಿಶೀಲನೆಮಾಡಲಾಗುವುದು. ಕಾಲಮಿತಿಯೊಳಗೆಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳು ವಂತೆಸೂಚಿಸಲಾಗಿದೆ ಎಂದು ತಿಳಿಸಿದರು.
ಬಜೆಟ್ ಹಂಚಿಕೆಯ ಅನುಸಾರ ಬಿಡುಗಡೆಮಾಡಿರುವ ಅನುದಾನವನ್ನು ಎಂಟು ಇಲಾಖೆಗಳು ಪೂರ್ಣವಾಗಿ ಇನ್ನೂ ಬಳಕೆಮಾಡಿಲ್ಲ . ಕೆಲವು ತಾಂತ್ರಿ ಕ ಕಾರಣಗಳಿಂದ ಅನುದಾನದ ಬಳಕೆಯಲ್ಲಿ ವಿಳಂಬವಾಗಿದೆ. ಎಲ್ಲ ಸಮಸ್ಯೆ ಗಳನ್ನು ಪರಿಹರಿಸಿ ತ್ವರಿತವಾಗಿ ಅನುದಾನ ಬಳಕೆಗೆ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ಹೇಳಿದರು.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರ ಕರಣಗಳ ತ್ವರಿತ ಇತ್ಯರ್ಥಕ್ಕೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನಪರವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತೆಯೂ ನಿರ್ದೇಶನ ನೀಡಲಾಗಿದೆ ಎಂದರು.
ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಜಾರಿಗೆ ಸಲಹಾ ಸಮಿತಿ ರಚಿಸಲಾಗುವುದು. ನವೆಂಬರ್ 1ರಿಂದ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.