ನ್ಯೂಡೆಲ್ಲಿ: ಪೆಟ್ರೋ ಲ್ ಮತ್ತು ಡೀಸೆಲ್ ದರವನ್ನು ಏರಿಸುತ್ತಲೇ ಇರುವ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರ ದಾಖಲೆ ನಿರ್ಮಿಸಿದೆ’ ಎಂದು ಕಿಡಿಕಾರಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಮೋದಿ ಸರ್ಕಾರ ಜನರಿಗೆ “ತೊಂದರೆ” ನೀಡುವಲ್ಲಿ ದಾಖಲೆಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.
ಟ್ವಿಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿದ್ದು, ಈ ವರ್ಷ ಪೆಟ್ರೋಲ್ ಬೆಲೆ ದಾಖಲೆಯ 23.53 ರೂ.ಗಳಷ್ಟು ಹೆಚ್ಚಾಗಿದೆ. ಮೋದಿ ಜಿ ಸರ್ಕಾರವು ಸಾರ್ವಜನಿಕರಿಗೆ ತೊಂದರೆ ನೀಡುವಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅತಿ ಹೆಚ್ಚು ನಿರುದ್ಯೋಗ, ಸರ್ಕಾರಿ ಆಸ್ತಿ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ ಎಂದು ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸತತ ನಾಲ್ಕನೇ ದಿನವಾದ ಶನಿವಾರ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಮೇಲಿನ ದರವನ್ನು ಪ್ರತಿ ಲೀಟರ್‌ಗೆ 36 ರೂ. ಮತ್ತು ಡೀಸೆಲ್ ಮೇಲೆ 26.58 ರೂ.ಗೆ ಏರಿಕೆ ಮಾಡಲಾಗಿದೆ.
ಈ ಮೂಲಕ ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರದೊಡ್ಡ ದಾಖಲೆ ನಿರ್ಮಿಸಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ನಿರುದ್ಯೋಗ ಸೃಷ್ಟಿ ಯಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟಮಾಡಲಾಗುತ್ತಿದೆ. ಒಂದು ವರ್ಷದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪೆಟ್ರೋಲ್ ದರ ಏರಿಕೆಯಾಗಿದೆ’ ಎಂದು ಹಿಂದಿಯಲ್ಲಿ ಟ್ವೀಟ್‌ಮಾಡಿದ್ದಾರೆ.
ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ “ಅಚ್ಛೇ ದಿನ್” (ಒಳ್ಳೆಯ ದಿನಗಳು) ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.