CrimeNEWSದೇಶ-ವಿದೇಶ

ಪ್ರೀತಿ ನಿರಾಕರಿಸಿದ ಪಾಲಕರು: ಪ್ರೇಯಸಿ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ ಯತ್ನ ಆಸ್ಪತ್ರೆಗೆ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಆಕೆಯ ಪೋಷಕರು ಒಪ್ಪದ ಕಾರಣ ತನ್ನ ಪ್ರೇಯಸಿಯ ಕತ್ತು ಸೀಳಿ, ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಅಜಿತ್ ಮತ್ತು ಯುವತಿ ಮೊಬೈಲ್ ಫೋನ್ ರಿಟೇಲ್ ಶೋರೂಮ್‍ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು, ಈ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರಿತಿಯಾಗಿದೆ. ಆ ಯುವತಿಯ ಪೋಷಕರು ಇವರಿಬ್ಬರ ಸಂಬಂಧವನ್ನು ಒಪ್ಪದೆ ಬೇರೊಬ್ಬನೊಂದಿಗೆ ಆಕೆಯ ಮದುವೆ ಏರ್ಪಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕ ಈ ಕೃತ್ಯ ಎಸಗಿದ್ದಾನೆ.

ಅಜಿತ್ ತನ್ನ ಪ್ರೇಯಸಿಯನ್ನು ಬೇರೆ ಯುವಕನ ಜೊತೆಗೆ ಮದುವೆ ಮಾಡುತ್ತಾರೆ ಎನ್ನುವ ವಿಚಾರವಾಗಿ ಮನನೊಂದಿದ್ದನು. ಒಂದು ದಿನ ಪ್ರೇಯಸಿಯ ಮನೆಗೆ ಹೋಗಿ ಆಕೆಗೆ ತನ್ನ ಪ್ಲಾನ್ ಹೇಳಿದ್ದಾನೆ. ಆಗ ಆಕೆ ಸಾಯಲು ಒಪ್ಪಿಲ್ಲ. ಇದರಿಂದ ತಾನೇ ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿ, ಬಳಿಕ ತಾನು ಕೂಡ ನೇಣು ಬಿಗಿದುಕೊಂಡು ಸಾಯಲು ಯತ್ನಿಸಿದ್ದಾನೆ.

ರೂಮಿನಲ್ಲಿ ಗಲಾಟೆ ಕೇಳಿ ಬಾಗಿಲು ಒಡೆದು ಒಳಗೆ ಬಂದ ಆಕೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ತಮ್ಮ ಮಗಳು ಹಾಗೂ ಅಜಿತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ನೋಡಿದ್ದಾರೆ. ತಕ್ಷಣ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಯುವತಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಗೆ ಬಂದ ಅಜಿತ್ ನೀವು ಯಾರಾದರೂ ನಮ್ಮಿಬ್ಬರ ಮದುವೆ ನಿಲ್ಲಿಸಲು ಪ್ರಯತ್ನಿಸಿದರೆ ಎಲ್ಲರನ್ನೂ ಕೊಲ್ಲುವುದಾಗಿ ಬೆದರಿಸಿದ್ದ. ನಂತರ ನಮ್ಮ ಮಗಳ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಎಂದು ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಂತರ ಅಜಿತ್ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ