NEWSದೇಶ-ವಿದೇಶಸಿನಿಪಥ

ವಿಚ್ಛೆದನದ ಬಳಿಕ ಮನದ ಮಾತು ಹಂಚಿಕೊಂಡ ಸಮಂತಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪುಣೆ: ತೆಲುಗು ಚಿತ್ರರಂಗದಲ್ಲಿ ತಮ್ಮ ನಟನೆಯಿಂದ ಗುರುತಿಸಿಕೊಂಡಿರುವ ಸಮಂತಾ ರುತ್ ಪ್ರಭು ಇತ್ತೀಚೆಗೆ ಪತಿ ನಾಗಚೈತನ್ಯರಿಂದ ವಿಚ್ಛೇದನ ಪಡೆದಿದ್ದಾರೆ. ವಿಚ್ಛೆದನದ ಬಳಿಕ ಸಂದರ್ಶನವೊಂದರಲ್ಲಿ ಸಮಂತಾ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ನಾಗಚೈತನ್ಯರಿಂದ ಬೇರೆಯಾದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಇದೇ ಮೊದಲ ಬಾರಿಗೆ ತಮ್ಮ ವಿಚ್ಛೇದನದ ನಂತರದ ಬದುಕಿನ ಕುರಿತು ಸಮಂತಾ ಹೇಳಿಕೊಂಡಿದ್ದಾರೆ.

ಅಕ್ಟೋಬರ್ 2ರಂದು ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ 4 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ತಮ್ಮ ವಿಚ್ಛೇದನದ ಕುರಿತು ಸ್ಪಷ್ಟನೆ ನೀಡಿದ್ದರು.

ವಿಚ್ಛೇದನದ ಕುರಿತು ಹೇಳಿಕೆ ನೀಡುವ ಮುನ್ನ ಸಮಂತಾ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಅಕೌಂಟ್​ನಲ್ಲಿ ಸಮಂತಾ ಅಕ್ಕಿನೇನಿ ಎಂಬ ಹೆಸರಿಗೆ ಕೋಕ್​ ನೀಡಿ ಸಮಂತಾ ಎಂದಷ್ಟೇ ಇರಿಸಿಕೊಂಡಿದ್ದರು. ಇದರಿಂದ ಸಮಂತಾ ಹಾಗೂ ನಾಗಚೈತನ್ಯರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ವದಂತಿಗಳು ಹರಿದಾಡುತಿದ್ದ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ವಿಚ್ಛೇದನದ ಕುರಿತು ಘೋಷಿಸಿ ಅಭಿಮಾನಿಗಳಿಗೆ ಶಾಕ್​ ನೀಡಿದ್ದರು.

ಇದೀಗ ಫಿಲ್ಮ್​ ಫೇರ್​ ಸಂದರ್ಶನವೊಂದರಲ್ಲಿ ಸಮಂತಾ ನಾಗಚೈತನ್ಯರೊಂದಿಗೆ ಬೇರೆಯಾಗಿದ್ದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜೀವನದಲ್ಲಿ ಕಷ್ಟದ ದಿನಗಳು ಬರುವುದು ಸಾಮಾನ್ಯ. ಅದನ್ನು ನಾವು ಧೈರ್ಯದಿಂದ ಎದುರಿಸಬೇಕು. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನಮಗೆ ಇರಬೇಕು.

ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ ಆದರೆ ನನ್ನನ್ನು ನಾನು ಸಮರ್ಥವಾಗಿ ನಿಭಾಯಿಸಿಕೊಂಡಿದ್ದೇನೆ.

ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಭಾವಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನು ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ ಎಂದು ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಸಮಂತಾ ವಿಚ್ಛೇದನದ ಬಳಿಕ ಮತ್ತೆ ತಮ್ಮ ನಟನಾ ಪ್ರಪಂಚಕ್ಕೆ ಮರಳಿದ್ದಾರೆ. ಡಿ.6ರಂದು ಸಮಂತಾ ತಮ್ಮ ಹೊಸ ಚಿತ್ರ ಯಶೋದಾ ಚಿತ್ರೀಕರಣವನ್ನು ಪುಣೆಯಲ್ಲಿ ಆರಂಭಿಸಿದ್ದಾರೆ. ಈ ಚಿತ್ರವನ್ನು ಹರಿ ಮತ್ತು ಹರೀಶ್ ನಿರ್ದೇಶಿಲಿದ್ದು, ತೆಲುಗು, ಮಲಯಾಳಂ, ತಮಿಳು, ಕನ್ನಡ, ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ಸಮಂತಾ ಲೇಖಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹೊಸ ಚಿತ್ರದ ಪೋಸ್ಟರ್​ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಹೊಸ ಚಿತ್ರಕ್ಕೆ ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...