NEWSದೇಶ-ವಿದೇಶಸಿನಿಪಥ

ಒಟಿಟಿ ಮೊರೆ ಹೋದ ಶಾರುಖ್​ ಸಿನಿಮಾ- ಬೇಸರಗೊಂಡ ಅಭಿಮಾನಿಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ಶಾರುಖ್​ ಖಾನ್ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಸಿನಿಮಾ ಕೆಲಸಗಳಲ್ಲಿಯೂ ಅವರು ತೊಡಗಿಕೊಳ್ಳುತ್ತಿಲ್ಲ. ಈ ಮಧ್ಯೆ ಅವರ ನಿರ್ಮಾಣದ ಸಿನಿಮಾ ಈಗ ಚಿತ್ರಮಂದಿರಕ್ಕೆ ಬರದೆ ನೇರವಾಗಿ ಒಟಿಟಿ ಮೊರೆ ಹೋಗಿರುವ ಸುದ್ದಿ ಹೊರ ಬಿದ್ದಿದೆ.

ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವ ಈ ಸಂದರ್ಭದಲ್ಲಿ ಒಟಿಟಿ ನಿರ್ಧಾರ ಅನಿವಾರ್ಯ ಎನ್ನುವ ಅಭಿಪ್ರಾಯವನ್ನು ಶಾರುಖ್​ ಹೊರ ಹಾಕಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಯಾವುದು ಆ ಸಿನಿಮಾ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2019ರಲ್ಲಿ ಶಾರುಖ್​ ಖಾನ್​ ಅವರು ತಮ್ಮ ನಿರ್ಮಾಣ ಸಂಸ್ಥೆ ‘ರೆಡ್​ ಚಿಲ್ಲೀಸ್​’ ಅಡಿಯಲ್ಲಿ ‘ಬಾಬ್​ ಬಿಸ್ವಾಸ್​’ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಭಿಷೇಕ್​ ಬಚ್ಚನ್​ ಸಿನಿಮಾದಲ್ಲಿ ಲೀಡ್​ ರೋಲ್​ ನಿರ್ವಹಿಸಿದ್ದಾರೆ.

2020ರಲ್ಲೇ ಸಿನಿಮಾ ಶೂಟಿಂಗ್​ ಪೂರ್ಣಗೊಂಡಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ಮಾಡೋಕೆ ಸಾಧ್ಯವಾಗಿರಲಿಲ್ಲ. ಈಗ ಎಲ್ಲ ಕಡೆಗಳಲ್ಲೂ ಚಿತ್ರಮಂದಿರ ತೆರೆದಿದೆ. ಆದರೆ, ಸಾಲುಸಾಲು ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಈ ಕಾರಣಕ್ಕೆ ಶಾರುಖ್​ ಒಟಿಟಿ ಮೊರೆ ಹೋಗಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಜೀ5 ಜತೆ ಶಾರುಖ್​ ಮಾತುಕತೆ ಮಾಡಿದ್ದಾರೆ. ಇದರ ಡೀಲ್​ ಕುದುರಿದ್ದು, ಶೀಘ್ರವೇ ರಿಲೀಸ್​ ದಿನಾಂಕ ಘೋಷಣೆ ಆಗಲಿದೆ. ಅಭಿಷೇಕ್​ ಬಚ್ಚನ್​ ಈ ಸಿನಿಮಾಗಾಗಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಚಿತ್ರಾಂಗದ ಸಿಂಗ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ಹೇಗಿರಲಿದೆ ಎಂಬುದು ಇನ್ನೂ ಗುಟ್ಟಾಗಿದೆ.

ವಿದ್ಯಾ ಬಾಲನ್​ ನಟನೆಯ ‘ಕಹಾನಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರದಲ್ಲಿ ಬರುವ ಬಾಬ್​ ಬಿಸ್ವಾಸ್ ಹೆಸರಿನ ಪಾತ್ರವನ್ನು ಶಾಶ್ವತ್​ ಚಟರ್ಜಿ ನಿರ್ವಹಿಸಿದ್ದರು. ಇದೇ ಪಾತ್ರ ಆಧರಿಸಿ ‘ಬಾಬ್​ ಬಿಸ್ವಾಸ್’ ಸಿದ್ಧಗೊಂಡಿದೆ.

ರೆಡ್​ ಚಿಲ್ಲೀಸ್​ ಬ್ಯಾನರ್​ ಅಡಿಯಲ್ಲಿ ಸಿದ್ಧವಾಗಿರುವ ಈ ಸಿನಿಮಾಗೆ ಶಾರುಖ್​ ಪತ್ನಿ ಗೌರಿ ಖಾನ್​, ಸುಜಯ್ ಘೋಷ್​ ಮತ್ತು ಗೌರವ್​ ವರ್ಮಾ ಬಂಡವಾಳ ಹೂಡಿದ್ದಾರೆ. ದಿಯಾ ಘೋಷ್​ ಅವರು ಇದೇ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ