ನ್ಯೂಡೆಲ್ಲಿ: ಭಾರತೀಯ ರಿಸರ್ವ್ ಬ್ಯಾಂ ಕ್ (ಆರ್ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10ರ ನಂತರದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅದೇ ಸ್ಥಾನಕ್ಕೆ ಮರು ನೇಮಕ ಮಾಡಲಾಗಿದೆ.
ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ.
ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು.
2018ರ ಡಿಸೆಂಬರ್ 11 ರಂದುಮೂರು ವರ್ಷಗಳ ಅವಧಿಗೆ ಅವರನ್ನು ರಿಸರ್ವ್ ಬ್ಯಾಂ ಕ್ನ ಗವರ್ನರ್ ಆಗಿ ನೇಮಕ ಮಾಡಲಾಗಿದೆ.