Please assign a menu to the primary menu location under menu

NEWSದೇಶ-ವಿದೇಶರಾಜಕೀಯ

ಇಂದು ಬೆಳಗ್ಗೆ ಲಖನೌನಲ್ಲಿ ಜಿಎಸ್‌ಟಿ ಮಂಡಳಿ ಸಭೆ – ಎಲ್ಲ ರಾಜ್ಯಗಳ ಹಣಕಾಸು ಸಚಿವರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಉತ್ತರಪ್ರದೇಶದ ಲಖನೌನಲ್ಲಿ ಇಂದು (ಸೆ.17) ಬೆಳಗ್ಗೆ 11 ಗಂಟೆಗೆ 45ನೇ ಜಿಎಸ್‌ಟಿ ಮಂಡಳಿ ಸಭೆ ನಡೆಯಲಿದೆ. ಸಭೆಯಲ್ಲಿ ಬಹುತೇಕ ಎಲ್ಲ ರಾಜ್ಯಗಳ ಹಣಕಾಸು ಸಚಿವರು ಭಾಗಿಯಾಗಲಿದ್ದಾರೆ.

ಈ ವೇಳೆ ರೆಸ್ಟೋರೆಂಟ್‌ಗಳ ತೆರಿಗೆ ವಂಚನೆಯಿಂದ ಸುಮಾರು 2,000 ಕೋಟಿ ರೂ. ನಷ್ಟವಾಗುತ್ತಿದ್ದು, ಇದನ್ನು ತಪ್ಪಿಸಲು ಜಿಎಸ್‌ಟಿ ವಿಧಿಸುವಂತೆ ಕೇಂದ್ರ, ರಾಜ್ಯ ಹಣಕಾಸು ಇಲಾಖೆಯ ಅಧಿಕಾರಿಗಳ ಸಮಿತಿ ಶಿಫಾರಸು ಮಾಡಲಿದೆ.

ಹಾಗೆಯೇ 1 ಲೀಟರ್‌ಗಿಂತ ಕಡಿಮೆ ತೆಂಗಿನ ಎಣ್ಣೆಗೆ ಶೇ.18ರಷ್ಟು ಜಿಎಸ್‌ಟಿ, ಲೀಟರ್‌ಗಿಂತ ಅಧಿಕ ತೆಂಗಿನ ಎಣ್ಣೆಗೆ ಬಾಟಲ್‌ಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ಶಿಫಾರಸು ಮಾಡಲಾಗುವುದು. ಸೋಲಾರ್ ಪ್ಯಾನಲ್ ಮೇಲಿನ ಜಿಎಸ್‌ಟಿಯನ್ನು ಶೇ.5ರಿಂದ ಶೇ.18ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಪೆಟ್ರೋಲ್, ಡೀಸೆಲ್​ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಮಂಡಳಿಯಲ್ಲಿ ಚರ್ಚೆ ನಡೆಸಲಾಗುವುದು. ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರುವ ವಿಚಾರಕ್ಕೆ ಸಂಬಂಧಪಟ್ಟಂತೆ ತೀರ್ಮಾನ ಕೈಗೊಳ್ಳಲು ಕೇರಳ ಹೈಕೋರ್ಟ್ ಜೂನ್ ತಿಂಗಳಲ್ಲಿ ಸೂಚನೆ ನೀಡಿತ್ತು.

ಹೀಗಾಗಿ ಇಂದಿನ ಸಭೆಯಲ್ಲಿ ಈ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ. ಒಂದು ವೇಳೆ ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಲಭ್ಯವಾಗುವ ಆದಾಯದಲ್ಲಿ ನಷ್ಟವಾಗಲಿದೆ.

ಜಿಎಸ್‌ಟಿ ವ್ಯಾಪ್ತಿಗೆ ತಂದರೆ 50:50 ಅನುಪಾತದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ಆದಾಯ ಹಂಚಿಕೆಯಾಗಲಿದೆ. ಜೊತೆಗೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿದ್ದು, ಲೀಟರ್ ಪೆಟ್ರೋಲ್ ಬೆಲೆ 59 ರೂಪಾಯಿಗೆ ಇಳಿಕೆಯಾಗಲಿದೆ ಎನ್ನಲಾಗಿದೆ.

ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತಂದಲ್ಲಿ ಪ್ರತಿ ಲೀಟರ್​​ಗೆ 50 ರೂ ದರದಲ್ಲಿ ಸಿಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾದಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...