Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶರಾಜಕೀಯ

ಪಂಜಾಬ್‌ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಂಡೀಗಢ: ಕಾಂಗ್ರೆಸ್ ಪಕ್ಷದಲ್ಲಿ ಹಲವು ದಿನಗಳಿಂದ ಎದ್ದಿದ್ದ ಬಂಡಾಯದಿಂದ ಇದೀಗ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೆಲ ತಿಂಗಳ ಹಿಂದೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಸಿಎಂ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದರು. ಈ ಸಂದರ್ಭ ಅಮರೀಂದರ್ ಸಿಂಗ್ ವಿರುದ್ಧ 24ಕ್ಕೂ ಹೆಚ್ಚು ಶಾಸಕರು ಅಸಮಾಧಾನ ಹೊರಹಾಕಿದ್ದರು. ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಪಂಜಾಬ್‍ನ ಮುಖ್ಯಮಂತ್ರಿ ಅಮರೀಂದರ್ ರಾಜೀನಾಮೆ ಕೊಟ್ಟಿದ್ದಾರೆ.

ಪಂಜಾಬ್‌ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದು, ಹಲವು ಬಿಕ್ಕಟ್ಟುಗಳ ನಡುವೆ ಹೈಕಮಾಂಡ್ ಸಿಂಗ್ ಅವರ ರಾಜೀನಾಮೆ ಪಡೆದಿದೆ. ರಾಜ್ಯಪಾಲರನ್ನು ಭೇಟಿಯಾದ ಅಮರೀಂದರ್ ಸಿಂಗ್ ರಾಜೀನಾಮೆ ಪತ್ರ ನೀಡಿದ್ದಾರೆ. ಬಳಿಕ ಮಾತನಾಡಿ, ಕಾಂಗ್ರೆಸ್ ತೊರೆಯುವ ಮುನ್ಸೂಚನೆ ಕೂಡ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಂಗ್, ತಾನು ಅವಮಾನಕ್ಕೆ ಒಳಗಾಗುತ್ತೇನೆ ಎಂದನಿಸಿತು, ಆದ್ದರಿಂದ ನಾನು ರಾಜೀನಾಮೆ ನೀಡಿದೆ ಎಂದು ಹೇಳಿದ್ದಾರೆ.

ನಾನು ರಾಜೀನಾಮೆ ನೀಡಲು ಹೋಗುತ್ತಿದ್ದೇನೆ ಎಂದು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಿಳಿಸಿದ್ದೇನೆ. ಇದು ಮೂರನೇ ಬಾರಿ ನಡೆಯುತ್ತಿದೆ. ನಾನು ಅವಮಾನಕ್ಕೆ ಒಳಗಾಗಿದ್ದೇನೆ. ಅವರು ಯಾರನ್ನು ನಂಬಬಲ್ಲರೋ ಅವರನ್ನು ಮುಖ್ಯಮಂತ್ರಿ ಮಾಡಬಹುದು ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷೆ ಏನು ನಿರ್ಧಾರ ಮಾಡುತ್ತಾರೋ ಅದು ಸರಿ. ನಾನು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದೇನೆ, ನನ್ನ ಬೆಂಬಲಿತರನ್ನು ಭೇಟಿಯಾದ ಬಳಿಕ ನಾನು ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ತನ್ನ ತಂದೆ ರಾಜೀನಾಮೆ ನೀಡುವ ಬಗ್ಗೆ ಪುತ್ರ ರಣೀಂದರ್ ಸಿಂಗ್ ಕೂಡಾ ಮಾಹಿತಿ ನೀಡಿದ್ದಾರೆ. ನನ್ನ ತಂದೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಅವರ ಜೊತೆಯಾಗಲು ನನಗೆ ಹೆಮ್ಮೆಯಿದೆ ಎಂದಿದ್ದಾರೆ.

ಅಮರೀಂದರ್ ಸಿಂಗ್‍ರನ್ನು ಬದಲಾಯಿಸುವಂತೆ ಅನೇಕ ಶಾಸಕರು ಹೈಕಮಾಂಡ್‍ಗೆ ಒತ್ತಡ ಹೇರಿರುವ ಪರಿಣಾಮ ಹೈಕಮಾಂಡ್ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಪಂಜಾಬ್ ವಿಧಾನಸಬೇ ಚುನಾವಣೆ ಕೇವಲ 4 ತಿಂಗಳು ಬಾಕಿ ಉಳಿದಿದ್ದು, ಅಧಿಕಾರ ಹಸ್ತಾಂತರದ ಪ್ರಸಂಗ ಕುತೂಹಲ ಮೂಡಿಸಿದೆ.

ಬಿಜೆಪಿ ಹಾದಿಯನ್ನೇ ಕಾಂಗ್ರೆಸ್ ಪಕ್ಷ ಕೂಡ ಹಿಡಿದಂತಿದೆ. ಕೆಲದಿನಗಳ ಹಿಂದೆ ಬಿಜೆಪಿ, ಕರ್ನಾಟಕ, ಗುಜಾರಾತ್ ಸೇರಿದಂತೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆ ಮಾಡಿದೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ಸಿನಲ್ಲಿ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದರು.

2017ರ ವಿಧಾನಸಭೆ ಚುನಾವಣೆ ಮುನ್ನ ಅಮರೀಂದರ್ ಸಿಂಗ್ ನೀಡಿದ್ದ ಭರವಸೆಗಳು ರಾಜ್ಯದಲ್ಲಿ ಈಡೇರದೆ ಇರುವುದೇ ಬಂಡಾಯಕ್ಕೆ ಪ್ರಮುಖ ಕಾರಣವಾಗಿದ್ದು, ಅಮರೀಂದರ್ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಸಚಿವರು ಮತ್ತು ಶಾಸಕರು ಹೈಕಮಾಂಡ್‍ಗೆ ದೂರು ನೀಡಿದ್ದರು ಎಂದು ಆರೋಪ ಕೇಳಿ ಬಂದಿತ್ತು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ