Please assign a menu to the primary menu location under menu

NEWSದೇಶ-ವಿದೇಶ

ಸುಪ್ರೀಂ ಕೋರ್ಟ್‌ನಲ್ಲಿ ಇಡಿ ನಿರ್ದೇಶಕರ ನೇಮಕಾತಿ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: 2018ರಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ನಿರ್ದೇಶಕರನ್ನಾಗಿ ಸಂಜಯ್‌ಮಿಶ್ರಾ ಅವರನ್ನು ನೇಮಕ ಮಾಡಿರುವ ಆದೇಶದಲ್ಲಿನ ಪೂರ್ವಾನ್ವಯ ಬದಲಾವಣೆಯನ್ನು ಪ್ರಶ್ನಿಸಿ ಸಲ್ಲಿ ಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠ, ಅಪರೂಪ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ನಿವೃತ್ತಿಯ ವಯಸ್ಸು ಸಮೀ‍ಪಿಸಿದ ಅಧಿಕಾರಿಗಳ ಅಧಿಕಾರ ಅವಧಿಯನ್ನು ವಿಸ್ತರಿಸಬಹುದು ಎಂದು ತಿಳಿಸಿದೆ.

ಶರ್ಮಾ ಅವರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ ಮೂರು ವರ್ಷಕ್ಕೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಮತ್ತೆ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಪಪಡಿಸಿದೆ.

ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿ ಸಂಜಯ್ಕುಮಾರ್ ಮಿಶ್ರಾ ಅವರನ್ನು ನವೆಂಬರ್ 19, 2018 ರಂದು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು .

ನಂತರ ನ. 13, 2020ರಂದು ಆದೇಶವನ್ನು ಪರಿಷ್ಕರಿಸಿ, ಆ ಎರಡು ವರ್ಷಗಳ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸಲಾಗಿತ್ತು.

ಮಿಶ್ರಾ ಅವರ ನೇಮಕಾತಿಯಲ್ಲಿ ಮಾಡಲಾಗಿದ್ದ ಈ ಪೂರ್ವಾನ್ವ ಯ ಬದಲಾವಣೆಯನ್ನು ಪ್ರಶ್ನಿಸಿ ಕಾಮನ್ ಕಾಸ್ ಸ್ವಯಂಸೇವಾ ಸಂಸ್ಥೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...