NEWSದೇಶ-ವಿದೇಶನಮ್ಮರಾಜ್ಯ

ಅವಿವಾಹಿತೆಗೆ ಇದೆ, ವಿಚ್ಛೇದಿತ ಪುತ್ರಿಗಿಲ್ಲ ಅನುಕಂಪದ ಉದ್ಯೋಗ: ಸುಪ್ರೀಂ ಕೋರ್ಟ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸರ್ಕಾರಿ ನೌಕರರು ಮರಣಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇ ದನ ಪಡೆದರೆ ಅಂಥ ಸಂದರ್ಭದಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋ ಗ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕಕ್ಕೆ ಸಂಬಂಧಿಸಿದ ಪ್ರ ಕರಣವೊಂದರ ವಿಚಾರಣೆ ವೇಳೆ ಸರ್ವೋಚ್ಛ ನ್ಯಾ ಯಾಲಯ ಈ ಅಂಶವನ್ನು ಸ್ಪಷ್ಟ ಪಡಿಸಿದೆ.

ಮಂಡ್ಯ ಜಿಲ್ಲಾ ಖಜಾನೆಯಲ್ಲಿ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿ. ಪಿ. ಭಾಗ್ಯ ಮ್ಮ ಅವರ ಪುತ್ರಿ ವಿ. ಸೌಮ್ಯ ಶ್ರೀ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋ ಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿತ್ತು . ಇದನ್ನು ಪ್ರ ಶ್ನಿಸಿ ಕರ್ನಾಟಕ ಸರ್ಕಾರ ಖಜಾನೆ ನಿರ್ದೇಶಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಯಮೂರ್ತಿ ಎಂ.ಆರ್.ಶಾ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠವು ಸೌಮ್ಯಶ್ರೀ ಅವರು ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಹೇಳಿದೆ.

‘ಕರ್ನಾಟಕ ನಾಗರಿಕ ಸೇವಾ (ಸಹಾನುಭೂತಿ ಆಧಾರದ ನೇಮಕಾತಿ) ನಿಯಮಗಳು – 1996’ ಪ್ರಕಾರ, ಸರ್ಕಾರಿ ಉದ್ಯೋ ಗಿಯ ವಿಚ್ಛೇ ದಿತ ಪುತ್ರಿ ಗೆ ಅನುಕಂಪದ ಆಧಾರದಲ್ಲಿ ಉದ್ಯೋ ಗ ನೀಡಲು ಅವಕಾಶವಿಲ್ಲ. ಉದ್ಯೋ ಗಿಯನ್ನೇ ಅವಲಂಬಿಸಿದ್ದ ಮದುವೆಯಾಗದ ಅಥವಾ ವಿಧವೆ ಪುತ್ರಿಗೆಮಾತ್ರ ಅನುಕಂಪದ ಆಧಾರದಲ್ಲಿ ಉದ್ಯೋ ಗ ನೀಡಬಹುದಾಗಿದೆ ಎಂದು ಪೀಠ ಹೇಳಿದೆ.

ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ 2021ರಲ್ಲಿ ತಿದ್ದು ಪಡಿಮಾಡಲಾಗಿದ್ದು , ‘ವಿಚ್ಛೇ ದಿತ ಪುತ್ರಿ ’ಯನ್ನೂ ಸೇರ್ಪಡೆಗೊಳಿಸಲಾಗಿದೆ. ಆದರೆ, ಉದ್ಯೋ ಗಿ ಮರಣಹೊಂದಿದ ನಂತರ ವಿಚ್ಛೇ ದನ ಪಡೆದ ಸಂದರ್ಭದಲ್ಲಿ ಇದನ್ನು ಪರಿಗಣಿಸಲಾಗದು ಎಂದು ಕೋರ್ಟ್ ಹೇಳಿದೆ.

ಸೌಮ್ಯ ಶ್ರೀ ಅವರ ವಿವಾಹ ಸಿಂಧುವಾಗಿದ್ದಾಗಲೇ 2012ರಮಾರ್ಚ್ 25ರಂದು ಪಿ. ಭಾಗ್ಯಮ್ಮ ಮೃತಪಟ್ಟಿದ್ದರು. 2012ರ ಸೆಪ್ಟೆಂಬರ್ 12ರಂದು ಸೌಮ್ಯಶ್ರೀ ಅವರು ಸಮ್ಮತಿಯೊಂದಿಗೆ ವಿಚ್ಛೇ ದನ ಪಡೆದಿದ್ದರು. ಅವರ ವಿಚ್ಛೇ ದನವನ್ನು 2013ರ ಮಾರ್ಚ್ 20ರಂದು ಮಂಡ್ಯದ ನ್ಯಾಯಾಲಯವು ಊರ್ಜಿತಗೊಳಿಸಿತ್ತು . ಇದಾದ ಮರುದಿನವೇ, ಅಂದರೆ 2013ರಮಾರ್ಚ್ 21ರಂದು ಸೌಮ್ಯಶ್ರೀ ಅನುಕಂಪದ ಆಧಾರದ ಉದ್ಯೋ ಗಕ್ಕೆ ಅರ್ಜಿ ಸಲ್ಲಿಸಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ