NEWSದೇಶ-ವಿದೇಶ

ಚೀನಾವನ್ನು ಗಡಿಯಿಂದ ಯಾವಾಗ ದಬ್ಬುತ್ತೀರಿ: ಶಾಗೆ ಕಾಂಗ್ರೆಸ್ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗಡಿ ಭಾಗಗಳಲ್ಲಿ ಭಾರತದಭೂಪ್ರದೇಶಗಳಿಂದ ಚೀನಾವನ್ನು ಯಾವಾಗ ಹೊರದಬ್ಬುತ್ತೀರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ದೇಶದ ಬಾಹ್ಯ ಮತ್ತು ಆಂತರಿಕ ಭದ್ರ ತೆಯ ವಿಚಾರದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಸುಮ್ಮನೇ ಎದೆತಟ್ಟಿಕೊಳ್ಳುವ ಅಮಿತ್ ಶಾ ಅವರು ದೇಶದ ಬದಲು ಬಾಹ್ಯ ಮತ್ತು ಆಂತರಿಕ ಭದ್ರತೆಯ ಬಗ್ಗೆ ಗಮನಹರಿಸಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈ ಕ್ ಕೈಗೊಳ್ಳು ವಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇ ಪಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರ ಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಅಮಿತ್ ಶಾ ಗೋವಾದ ಪಣಜಿಯಲ್ಲಿ ಹೇಳಿದ್ದರು.

ಅಮಿತ್ ಶಾ ಅವರು ಮೊದಲು ಚೀನಾದ ಹೆಸರು ಉಚ್ಚರಿಸಲಿ. ಆ ದೇಶದ ಬಗ್ಗೆ ಮೋದಿ ಸರ್ಕಾರಕ್ಕೆ ಹೆದರಿಕೆ ಇದೆ. ಚೀನಾ ಹೆಸರೆತ್ತಿದ ಬಳಿಕ ಆ ದೇಶದಯೋಧರನ್ನು ನಮ್ಮ ಭೂ ಪ್ರದೇಶಗಳಿಂದ ಯಾವಾಗ ಹೊರಗೆ ಕಳುಹಿಸುತ್ತೀರಿ ಎಂಬುದನ್ನು ತಿಳಿಸಲಿ.

ಚೀನಾ ಸೇನೆಯುತನ್ನ ಲಜ್ಜೆ ಗೆಟ್ಟ ನಡೆಯಿಂದ ಆತಿಕ್ರಮಿಸಿಕೊಂಡಿರುವ ನಮ್ಮ 900 ಕಿಲೋಮೀಟರ್ಭೂಪ್ರದೇಶವನ್ನು ಮರಳಿ ಪಡೆಯಲು ಅವರು ಗಡುವು ವಿಧಿಸಿಕೊಳ್ಳಲಿ ಎಂದು ಸುರ್ಜೇವಾಲ ಹೇಳಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ