Breaking NewsNEWSದೇಶ-ವಿದೇಶ

ಮರಾಠರಿಗೆ ಶೇ.50 ರಷ್ಟು ಮೀಸಲಾತಿ ಅಸಂವಿಧಾನಿಕ: ಮಹತ್ವದ ಆದೇಶ ನೀಡಿದ ಸರ್ವೋಚ್ಚ ನ್ಯಾಯಾಲಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಮರಾಠರಿಗೆ ಶೇ.50 ರಷ್ಟು ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರ ನಿರ್ಧಾರವನ್ನು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್, ಆ ಕಾನೂನನ್ನು ಬುಧವಾರ ಅಸಿಂಧುಗೊಳಿಸಿದೆ.

2018ರಲ್ಲಿ ಮಹಾರಾಷ್ಟ್ರ ಸರ್ಕಾರ ಮಹಾರಾಷ್ಟ್ರ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕಾಯ್ದೆ ಜಾರಿಗೆ ತಂದಿತು. ಅದರಂತೆ, ಮಹಾರಾಷ್ಟ್ರದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಉದ್ಯೋಗಿಗಳಲ್ಲಿ ಮರಾಠ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಒದಗಿಸಿತ್ತು.

ಬಾಂಬೆ ಹೈಕೋರ್ಟ್ ಕೂಡ ಈ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಿತಾದರೂ ಮರಾಠ ಸಮುದಾಯಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಶೇ. 12 ಮತ್ತು ಸರ್ಕಾರಿ ಉದ್ಯೋಗಿಗಳಲ್ಲಿ ಶೇ. 13 ಮೀಸಲಾತಿ ಮಾತ್ರ ಸಾಕು ಎಂದು ತೀರ್ಪು ನೀಡಿತ್ತು.

ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಮತ್ತು ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾದವು. 2019ರಲ್ಲಿ ಸುಪ್ರೀಂ ಕೋರ್ಟ್ ಈ ಕಾನೂನು ಜಾರಿಗೆ ತಡೆ ತಂದಿತು. 2021ರ ಮಾರ್ಚ್ ತಿಂಗಳಲ್ಲಿ ಐವರು ಸದಸ್ಯರ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿತು.

ಇದೀಗ 1992ರಲ್ಲಿ ಮೀಸಲಾತಿ ಶೇ. 50ಕ್ಕೆ ಮಿತಿಯಾಗಬೇಕೆಂದು ನೀಡಿದ್ದ ತೀರ್ಪನ್ನು ಮಾನದಂಡವಾಗಿರಿಸಿಕೊಂಡು ಇವತ್ತು ಸರ್ವೋಚ್ಚ ನ್ಯಾಯಪೀಠ ಈ ತೀರ್ಪು ನೀಡಿದೆ.

ಶೇ.50ಕ್ಕಿಂತ ಹೆಚ್ಚು ಮೀಸಲಾತಿ ನೀಡುವುದು ಕಾನೂನಿನ ಪ್ರಕಾರ ಸರಿಯಲ್ಲ. ಇದು ಅಸಂವಿಧಾನಿಕವಾದದ್ದು. ಒಟ್ಟಾರೆ ಮೀಸಲಾತಿ ಶೇ. 50ಕ್ಕಿಂತ ಹೆಚ್ಚು ಇರುವಂತಿಲ್ಲ. ಮರಾಠಗರಿಗೆ ಮೀಸಲಾತಿ ಕೊಟ್ಟರೆ ಮೀಸಲಾತಿ ಪ್ರಮಾಣ ಶೇ. 50 ಮೀರುತ್ತದೆ. ಇದರಿಂದ ಸಮಾನತೆ ತತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಐವರು ಸದಸ್ಯರ ಸಾಂವಿಧಾನಿಕ ಸುಪ್ರೀಂ ನ್ಯಾಯಪೀಠ ಹೇಳಿದೆ.

ನ್ಯಾ.ಅಶೋಕ್ ಭೂಷಣ್ ನೇತೃತ್ವದ ಈ ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ್ ರಾವ್, ಎಸ್. ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರಿದ್ದರು.

1992ರಲ್ಲಿ ಮಂಡಲ್ ಆಯೋಗದ ಪ್ರಕರಣ ಎಂದು ಖ್ಯಾತವಾಗಿದ್ದ ಇಂದ್ರಾ ಸಾಹನಿ ಪ್ರಕರಣದಲ್ಲಿ ಆಗಿನ 9 ಸದಸ್ಯರ ಸಾಂವಿಧಾನಿಕ ಸುಪ್ರೀಂ ನ್ಯಾಯಪೀಠ ಮೀಸಲಾತಿ ಶೇ. 50ಕ್ಕಿಂತ ಹೆಚ್ಚು ಇರಬಾರದು ಎಂದು ಮಹತ್ವದ ತೀರ್ಪು ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಇಂದು ಸರ್ವೋಚ್ಚ ನ್ಯಾಯಾಲಯವು ಮರಾಠ ಮೀಸಲಾತಿಯ ಸಿಂಧುತ್ವವನ್ನು ಪ್ರಶ್ನಿಸಿ ನಿರ್ಧಾರವನ್ನು ರದ್ದುಗೊಳಿಸಿದೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!