ವೃದ್ಧ ದಂಪತಿ ದಾರಿ ತಪ್ಪಿಸಿದ ಭಾರತೀಯ ರೈಲ್ವೆಗೆ 3 ಲಕ್ಷ ರೂ.ದಂಡ: 11 ವರ್ಷದ ಬಳಿಕ ತೀರ್ಪು ನೀಡಿದ ನ್ಯಾಯಾಲಯ
ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಟಿಕೆಟ್ ಇದ್ದರು ರೈಲಿನಿಂದ ವೃದ್ಧ ದಂಪತಿ ದಾರಿ ತಪ್ಪಿಸಿ ಬೇರೆ ಸ್ಥಳದಲ್ಲಿ ಇಳಿಯುವಂತೆ ಮಾಡಿದ್ದಕ್ಕೆ ರೈಲ್ವೆ ಇಲಾಖೆಗೆ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಆ ದಂಡ ರೂಪದ ಹಣವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಬೇಕು. ಜೊತೆಗೆ 2,500 ರೂಪಾಯಿ ದಾವೆ ವೆಚ್ಚವನ್ನು ಸಹ ಭಾರತೀಯ ರೈಲ್ವೆ ಸರಿದೂಗಿಸಿ ಕೊಡಬೇಕು ಎಂದು ಕರ್ನಾಟಕ ನ್ಯಾಯಾಲಯ ಆದೇಶಿಸಿದೆ.
ಸುಮಾರು 11 ವರ್ಷಗಳ ಸುದೀರ್ಘ ಹೋರಾಟದ ಬಳಿಕ ಸಂತ್ರಸ್ತ ದಂಪತಿಗೆ ಈ ಮೂಲಕ ಕರ್ನಾಟಕ ನ್ಯಾಯಾಲಯ ನ್ಯಾಯ ಒದಗಿಸಿಕೊಟ್ಟಿದೆ.
ಏನಿದು ಪ್ರಕರಣ?:
2010ರಲ್ಲಿ ಈ ವೃದ್ಧ ದಂಪತಿ ಸೋಲಾಪುರದಿಂದ ಬೆಳಗಾವಿಗೆ 3 ಟಯರ್ ಎಸಿ ಟಿಕೆಟ್ ಖರೀದಿ ಮಾಡಿದ್ದರು. ದಂಪತಿಯ ಪೈಕಿ ಒಬ್ಬರು ವಿಶೇಷ ಚೇತನರಾಗಿದ್ದರು. ಈ ವೃದ್ಧ ದಂಪತಿ ತಮ್ಮ ಬರ್ತ್ಗೆ ನಿಗದಿಯಾಗಿದ್ದ ಕೋಟಾ ಅಡಿಯಲ್ಲಿ ಸೀಟನ್ನು ಕಾಯ್ದಿರಿಸಿದ್ದರು. ಆದರೆ ಟಿಕೆಟ್ ಪರೀಕ್ಷಕರು ಅವರಿಗೆ ಕಾಯ್ದಿರಿಸಲಾಗಿದ್ದ ಕೆಳಗಿನ ಬರ್ತ್ ನೀಡಲು ನಿರಾಕರಿಸಿದ್ದಾರೆ.
ಅಲ್ಲದೆ ಅವರು ವೃದ್ಧ ದಂಪತಿ ಮತ್ತು ವಿಶೇಷ ಚೇತನ ಎನ್ನುವ ಸಾಮಾನ್ಯ ಕಾಳಜಿಯನ್ನು ಸಹ ಮರೆತಿದ್ದಾರೆ. ಕಂಪಾರ್ಟ್ಮೆಂಟ್ನಲ್ಲಿ ಆರು ಲೋವರ್ ಬರ್ತ್ ಸೀಟುಗಳು ಖಾಲಿ ಇದ್ದರೂ ಸಹ ಟಿಕೆಟ್ ಪರೀಕ್ಷಕರು ಸೀಟು ಕೊಡಲು ನಿರಾಕರಣೆ ಮಾಡಿದ್ದಾರೆ. ಅಸಹಾಯಕ ವೃದ್ಧ ದಂಪತಿ ಅಂತಹ ಪರಿಸ್ಥಿಯಲ್ಲಿ ಏನು ಮಾಡಬೇಕು? ಯಾರ ನೆರವಿಗೆ ಹೋಗಬೇಕು? ಎನ್ನುವುದು ತಿಳಿಯದೇ ಆತಂಕಕ್ಕೆ ಒಳಗಾಗಿದ್ದಾರೆ.
ದಂಪತಿ ಸರಿಯಾದ ನಿಯಮ ಪಾಲಿಸಿದ್ದರೂ ಸಹ ವೃದ್ಧ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸಹ ಟಿಕೆಟ್ ಪರೀಕ್ಷಕರನ್ನು ಪರಿ ಪರಿಯಾಗಿ ಮತ್ತೆ ಮತ್ತೆ ಕೇಳಿಕೊಂಡಿದ್ದಾರೆ. ಎಷ್ಟೇ ಪ್ರಯತ್ನಪಟ್ಟರೂ ಟಿಕೆಟ್ ಪರೀಕ್ಷಕರ ಮನಸ್ಸು ಕರಗಲಿಲ್ಲ. ಅಧಿಕಾರದ ಗತ್ತಿನಲ್ಲಿ ಮಾನವೀಯತೆಯನ್ನು ಮರೆತಂತೆ ವರ್ತಿಸಿರುವುದು ಈ ಘಟನೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ.
ಜತೆಗೆ ವಯಸ್ಸಾದವರಿಗೆ ನೆರವಾಗುವುದು ಮಾನವೀಯತೆ, ಎಷ್ಟೋ ಸಂದರ್ಭಗಳಲ್ಲಿ ಸರ್ಕಾರಿ ಅಧಿಕಾರಿಗಳು ವೃದ್ಧರಿಗೆ ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಆದರೆ ಇಲ್ಲಿ ಪರಿಸ್ಥಿತಿ ವಿಭಿನ್ನವಾಗಿದ್ದು, ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತು.
ಇಷ್ಟಾದ ನಂತರ ರೈಲ್ವೆ ಸಿಬ್ಬಂದಿಯೊಬ್ಬರು ಈ ವೃದ್ಧ ದಂಪತಿಯ ದಾರಿಯನ್ನು ತಪ್ಪಿಸಿದ್ದಾರೆ. ವೃದ್ಧ ದಂಪತಿ ಇಳಿಯಬೇಕಿದ್ದ ನಿಲ್ದಾಣದಿಂದ 100 ಕಿಲೋ ಮೀಟರ್ ದೂರದಲ್ಲಿ ತಪ್ಪು ರೈಲ್ವೆ ನಿಲ್ದಾಣದಲ್ಲಿ ಇಳಿಸಿದ್ದಾರೆ. ಈ ಘಟನೆಯಿಂದ ಏನು ಮಾಡಬೇಕೆಂದು ತೋಚದ ದಂಪತಿ ಕಂಗಾಲಾಗಿದ್ದಾರೆ.
ಇನ್ನೊಂದು ಕಡೆ ಈ ವೃದ್ಧದಂಪತಿಯನ್ನು ಕರೆದುಕೊಂಡು ಹೋಗಲು ಅವರ ಮಗ ಬೀರೂರಿನ ಬಳಿ ಕಾದು ಸುಸ್ತಾಗಿದ್ದಾರೆ. ಕಡೆಗೆ ವೃದ್ಧ ದಂಪತಿ ಮತ್ತು ಮಗ ಒಂದಾಗಿದ್ದಾರೆ. ಆ ನಂತರ ಅವರ ಮಗ ಭಾರತೀಯ ರೈಲ್ವೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎರಡು ಕಡೆಯಿಂದ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಕೊನೆಗೆ ವೃದ್ಧ ದಂಪತಿ ಅನುಭವಿಸಿದ ಯಾತನೆ ಮತ್ತು ನೋವನ್ನು ಪರಿಗಣಿಸಿ ರೈಲ್ವೆ ಇಲಾಖೆಗೆ ದಂಡ ವಿಧಿಸಿ ತೀರ್ಪು ನೀಡಿದೆ.
Related
You Might Also Like
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...