CrimeNEWSದೇಶ-ವಿದೇಶ

ಬಿಜಾಪುರ್ ಗಡಿಯಲ್ಲಿ ನಕ್ಸಲರು- ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಚಕಮ: 22 ಯೋಧರು ಹುತಾತ್ಮ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬಿಜಾಪುರ್‌: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಗಾಯಗೊಂಡಿದ್ದ ಭದ್ರತಾ ಪಡೆ ಸಿಬ್ಬಂದಿಗೆ ನಕ್ಸಲರು ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಭದ್ರತಾ ಪಡೆ ಸಿಬ್ಬಂದಿಯ ಕೈಯನ್ನು ಕತ್ತರಿಸುವ ಮೂಲಕ ಅವರನ್ನು ಫೈಶಾಚಿಕವಾಗಿ ನಡೆಸಿಕೊಂಡಿದ್ದಾರೆ ಎಂದು ತಿಳಿದರು ಬಂದಿದೆ.

ಇನ್ನು ಈ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಕಳೆದು ಕಳೆದುಕೊಂಡಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ತಿಳಿಸಿದ್ದಾರೆ.

ಈ ಗಡಿಗಳಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.

ನಕ್ಸಲರ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಛತ್ತೀಸ್ ಗಢ ನಕ್ಸಲ್ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಭೂಪೆಶ್ ಬಾಘೆಲ್, 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿರುವ ಬಗ್ಗೆ ತಿಳಿಸಿದರು. 7 ಭದ್ರತಾ ಸಿಬ್ಬಂದಿಯನ್ನು ರಾಯಪುರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಮಾಹಿತಿ ನೀಡಿದರು.

ಇನ್ನು ಕೇಂದ್ರ ಗೃಹ ಸಚಿವ ಅಮೀತ್‌ ಷಾ ಮಾತನಾಡಿ, ಭದ್ರತಾ ಪಡೆ ಸಿಬ್ಬಂದಿ ಜೀವ ತೆಗೆದವರನ್ನು ವೃತ ಬಿಡುವುದಿಲ್ಲ. ಇದಕ್ಕೆ ನಕ್ಸಲರು ಸರಿಯಾದ ಬೆಲೆ ತೆತ್ತಲೆ ಬೇಕು ಅದನ್ನು ನಾವು ಕಕ್ಕಿಸುತ್ತೇವೆ ಎಂದು ಆಕ್ರೋಶ ಭರಿತ ಮಾತುಗಳಿಂದ ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ