Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಪೆಟ್ರೋಲ್ ಕೈಗೆಟುಕದಂತೆ ಮಾಡಲು ನಿರ್ಧರಿಸಿದೆ ಕೇಂದ್ರ ಸರ್ಕಾರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಮನಗರ: ಜನವರಿಯಿಂದ ಪೆಟ್ರೋಲ್ ದರ 43 ಬಾರಿ ಏರಿಕೆಯಾಗಿದೆ. ಇದು ದೇಶದ ಆರ್ಥಿಕ ಮತ್ತು ಆಡಳಿತಾತ್ಮಕ ರಂಗಗಳಲ್ಲಿ ಸರ್ಕಾರದ ಅಸಮರ್ಥತೆಯನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಜಿಲ್ಲೆಯ ಕೂಟಗಲ್ ಹೋಬಳಿಯ ಜಾಲಮಂಗಲ ಗ್ರಾಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ಆಹಾರ ಮತ್ತು ತರಕಾರಿ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಕೊರೊನಾದ ಇಂತಹ ಸಂದಿಗ್ಧ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾದ ಸರ್ಕಾರ ಬೆಲೆ ಏರಿಸುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಡಿ ಮೀರುತ್ತಿದೆ. ಅಡುಗೆ ಎಣ್ಣೆ ಬೆಲೆ ಲೀಟರ್ 220 ರೂ. ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ 5 ತಿಂಗಳಾದರೂ ಕೇವಲ 3.17% ಭಾರತೀಯರು ಮಾತ್ರ ಕೋವಿಡ್ ಲಸಿಕೆ ಪಡೆದಿದ್ದಾರೆ. ಇದು ಕೂಡ ಸರ್ಕಾರದ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ.

ಜಾತಿ ಮತ್ತು ಧರ್ಮಗಳನ್ನು ಲೆಕ್ಕ ಹಾಕದೆ ಎಲ್ಲಾ ಜನರಿಗೆ ಕಾಂಗ್ರೆಸ್ ಉಚಿತ ಲಸಿಕೆ ನೀಡುತ್ತಿದೆ. ನಿನ್ನೆಯಷ್ಟೇ ನಾನು 3 ಲಕ್ಷ ಜನರಿಗೆ ಉಚಿತ ಲಸಿಕೆ ಹಾಕುವ ಅಭಿಯಾನವನ್ನು ದಾವಣಗೆರೆಯಲ್ಲಿ ಪ್ರಾರಂಭಿಸಿದೆ. ಆದರೆ ಮತ್ತೊಂದೆಡೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿ ಲಸಿಕೆಗೆ ₹900 ದರ ನಿಗದಿ ಪಡಿಸಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕಿರುವ ಸಾರ್ವಜನಿಕರ ಮೇಲಿನ ಉದಾಸೀನತೆಗೆ ಸಾಕ್ಷಿ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಜನವರಿಯಲ್ಲಿ 10 ಬಾರಿ, ಫೆಬ್ರವರಿಯಲ್ಲಿ 16 ಬಾರಿ, ಮೇ ತಿಂಗಳಲ್ಲಿ 16 ಬಾರಿ ಮತ್ತು ಜೂನ್ ಮೊದಲ ವಾರದಲ್ಲಿ ಒಮ್ಮೆ ಪೆಟ್ರೋಲ್ ದರವನ್ನು ಹೆಚ್ಚಿಸಿದೆ. ಅದು ಜನಸಾಮಾನ್ಯರಿಗೆ ಪೆಟ್ರೋಲ್ ಕೈಗೆಟುಕದಂತೆ ಮಾಡಲು ನಿರ್ಧರಿಸಿದೆ. ನಾವೆಲ್ಲರೂ ಪೆಟ್ರೋಲ್ ಪಂಪ್‌ಗಳ ಮುಂದೆ ಪ್ರತಿಭಟನೆ ಮಾಡೋಣ ಎಂದು ಕರೆ ನೀಡಿದರು.

6.6 ಕೋಟಿ ಲಸಿಕೆಗಳನ್ನು ರಫ್ತು ಮಾಡುವ ಮೂಲಕ ಸರ್ಕಾರ ತನ್ನದೇ ಜನರ ಆರೋಗ್ಯ ಮತ್ತು ಜೀವನದೊಂದಿಗೆ ರಾಜಿ ಮಾಡಿಕೊಂಡಿದೆ ಮತ್ತು ಆ ಮೂಲಕ ದೇಶದಲ್ಲಿ ಮರಣ ಪ್ರಮಾಣವನ್ನು ಹೆಚ್ಚಿಸಿದೆ ಎಂದು ಹೇಳಿದೆ.

Leave a Reply

error: Content is protected !!
LATEST
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ