NEWSದೇಶ-ವಿದೇಶ

ನ್ಯೂಡೆಲ್ಲಿಯಲ್ಲಿ ಮತ್ತೊಂದು ವಾರ ಲಾಕ್‌ಡೌನ್‌ ವಿಸ್ತರಣೆ: ಸಿಎಂ ಅರವಿಂದ್‌ ಕೇಜ್ರಿವಾಲ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಿಸಿದ್ದು,  ಮೇ 24ರ ವರೆಗೆ  ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಲಾಕ್ಡೌನ್ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉತ್ತಮ ಬೆಳವಣಿಗೆಗಳು ಕಂಡು ಬಂದಿವೆ. ಸೋಂಕು ಪ್ರಕರಣಗಳ ಸಂಖ್ಯೆಯಲ್ಲೂ ಭಾರೀ ಇಳಿಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಕಡಿಯಾಗುತ್ತಿದೆ. ಹೀಗಾಗಿ ಇನ್ನಷ್ಟು  ದಿನ ಲಾಕ್‌ಡೌನ್‌ ವಿಸ್ತರಿಸುವುದರಿಂದ ಇಷ್ಟು ದಿನಗಳು ನಾವು ಪಟ್ಟ ಪರಿಶ್ರಮಕ್ಕೆ ಫಲಸಿಗುವುದು.  ಈ ಹಿನ್ನೆಲೆಯಲ್ಲಿ  ಮತ್ತೊಂದು ವಾರ ಲಾಕ್ಡೌನ್ ವಿಸ್ತರಿಸಲಾಗುತ್ತಿದೆ. ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ 8,506 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಂದು ತಿಂಗಳ ಬಳಿಕ ದೆಹಲಿಯಲ್ಲಿ 10,000ಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಲಾಕ್ಡೌನ್ ಕಾರಣ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ