ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್. ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ದೇವೇಗೌಡ ಅವರಿಗೆ ಕೆಲವು ದಿನಗಳಿಂದ ಶೀತದ ಲಕ್ಷಣವಿತ್ತು. ಈ ಕಾರಣದಿಂದ ಮನೆಯಲ್ಲೇ ಉಳಿದುಕೊಂಡಿದ್ದರು. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರ ಗಂಟಲು ಮತ್ತು ಮೂಗಿನ ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು.
ಬುಧವಾರ ಬೆಳಗ್ಗೆ ಪರೀಕ್ಷಾ ವರದಿಗಳು ಬಂದಿದ್ದು, ದೇವೇಗೌಡ ಮತ್ತು ಚೆನ್ನಮ್ಮ ಇಬ್ಬರಿಗೂ ಸೋಂಕು ಇಎಉವುದು ಧೃಡಪಟ್ಟಿದೆ. ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನಮ್ಮ ಅವರನ್ನು ಮನೆಯಲ್ಲೇ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಈ ಕುರಿತು ಟ್ರಿಟ್ ಮಾಡಿರುವ ದೇವೇಗೌಡರು, ಕಾರ್ಯಕರ್ತರು ಆತಂಕಕ್ಕೆ ಒಳಗಾಗಬೇಡಿ. ಕೆಲವು ದಿನಗಳಿಂದ ಈಚೆಗೆ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ದಂಪತಿ ಶೀಘ್ರ ಗುಣಮುಖರಾಗುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಹಾರೈಸಿದ್ದಾರೆ.