NEWSದೇಶ-ವಿದೇಶರಾಜಕೀಯ

ಜಿಎಸ್‌ಟಿ ವ್ಯಾಪ್ತಿಗೆ ಇಂಧನ, ನೈಸರ್ಗಿಕ ಅನಿಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ಜೆಟ್ ಇಂಧನ (ಎಟಿಎಫ್) ಹಾಗೂ ನೈಸರ್ಗಿಕ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವ ಪ್ರಸ್ತಾವನೆ ಈ ವರೆಗೂ ಇಲ್ಲ ಎಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳನ್ನು ತೈಲ ಬೆಲೆ ಏರಿಕೆಯ ಪರಿಣಾಮದಿಂದ ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ನಾನು ನಿಮಗೆ ಉತ್ತರ ಕೊಡಲೇ ಬೇಕಾಗಿದೆ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದರು.

ತೈಲವನ್ನು ಜಿಎಸ್ ಟಿ ವ್ಯಾಪ್ತಿಗೆ ತರದೇ ಇರುವುದರಿಂದ ಪೆಟ್ರೋಲ್, ಡೀಸೆಲ್ ಮುಂತಾದವುಗಳ ಮೇಲೆ ಕೇಂದ್ರ ಸರ್ಕಾರ ಅಬಕಾರಿ ಸುಂಕ ವಿಧಿಸಲು ಅವಕಾಶವಿದ್ದರೆ, ವ್ಯಾಟ್ ನ್ನು(ಮೌಲ್ಯ ವರ್ಧಿತ ತೆರಿಗೆ) ವಿಧಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶವಿದೆ. ಈ ತೆರಿಗೆಗಳಿಂದಾಗಿ ತೈಲ ದರ ಗಗನಕ್ಕೇರುತ್ತಿದೆ.

2017 ರಲ್ಲಿ ಜಿಎಸ್ ಟಿ ಜಾರಿಗೆ ತಂದಾಗ, 5 ತೈಲಗಳನ್ನು ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ ಇಟ್ಟು, ರಾಜ್ಯ, ಕೇಂದ್ರ ಸರ್ಕಾರಗಳ ಆದಾಯಕ್ಕೆ ಇವುಗಳಿಂದ ದಾರಿ ಮಾಡಿಕೊಡಲಾಗಿತ್ತು.

ಒಂದೆಡೆ ರಾಜ್ಯ, ಕೇಂದ್ರ ಸರ್ಕಾರಗಳು ಹಾಕುತ್ತಿರುವ ತೆರಿಗಳನ್ನು ಇಳಿಕೆ ಮಾಡುತ್ತಿಲ್ಲ ಮತ್ತೊಂದೆಡೆ, ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ತತ್ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ದರಗಳು ಸಾರ್ವಕಾಲಿಕ ದಾಖಲೆಯ ಏರಿಕೆ ಕಾಣುತ್ತಿದ್ದು, ಇವುಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಹೆಚ್ಚುತ್ತಿದೆ.

ತೈಲವನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂದರೆ ಜಿಎಸ್ ಟಿ ಪರಿಷತ್ ಶಿಫಾರಸು ಕಳಿಸಬೇಕು. ಜಿಎಸ್ ಟಿ ಪರಿಷತ್ ನಲ್ಲಿ ರಾಜ್ಯಸರ್ಕಾರಗಳೂ ಪ್ರತಿನಿಧಿಗಳಾಗಿದ್ದು, ಈ ವರೆಗೂ ಅಂತಹ ಶಿಫಾರಸು ಬಂದಿಲ್ಲ, ಮುಂದೆ ಪ್ರಸ್ತಾವನೆ ಬಂದರೂ ಬರಬಹುದು ಎಂದು ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ.

ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಕಳೆದ ವರ್ಷ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 19.98 ರೂಪಾಯಿಗಳಷ್ಟು ಇತ್ತು. ಈ ವರ್ಷ ಅದು 32.9 ರೂಪಾಯಿಗಳಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಅದೇ ರೀತಿ ಕಳೆದ ವರ್ಷ 15.83 ರಷ್ಟಿದ್ದ ಡೀಸೆಲ್ ಮೇಲಿನ ಅಬಕಾರಿ ಸುಂಕ ಈ ವರ್ಷ 31.8 ರಷ್ಟಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್