NEWSದೇಶ-ವಿದೇಶರಾಜಕೀಯ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ನಂತರ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಹೆಚ್ಚಾಗಿದೆ: ಕೇರಳ ಸಿಎಂ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿರುವನಂತಪುರಂ: ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡುತ್ತಿರುವುದು ಹೆಚ್ಚಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಆರೋಪಿಸಿದ್ದಾರೆ

ಒಂದೆಡೆ ಪಿಣರಾಯಿ ವಿಜಯನ್‌ ರಾಜೀನಾಮೆ ನೀಡಬೇಕು ಎನ್ನುವ ಕೂಗು ಕೇಳಿಬರುತ್ತಿದೆ, ಇನ್ನೊಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಕೇರಳದ ಮೂಲ ಸೌಕರ್ಯ (Infrastructure) ಇನ್ವೆಸ್ಟ್ಮೆಂಟ್ ನಿರ್ನಾಮ ಮಾಡಲು ಪಣತೊಟ್ಟಿದೆ ಎಂದು ಹೇಳಿದ್ದಾರೆ.

ಚುನಾವಣೆಗೆ ಬೆರಳೆಣಿಕೆ ದಿನ ಮಾತ್ರ ಬಾಕಿ ಇರುವಾಗಲೇ ಪಿಣರಾಯಿ ಮೇಲೆ ಆರೋಪ ಕೇಳಿಬಂದಿದ್ದು ವಿಪಕ್ಷಗಳ ಕೈಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಅಲ್ಲದೆ ಇದು ಎಡಪಕ್ಷಗಳ ಚುನಾವಣಾ ಗೆಲುವಿಗೆ ಹಿನ್ನಡೆಯಾಗುವ ಎಲ್ಲಾ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಯುಎಇ ಮಾಜಿ ರಾಯಭಾರಿ ಸೇರಿಕೊಂಡು ಹಣ ವರ್ಗಾವಣೆ ಮಾಡಿದ್ದಾರೆ ಎಂದು ಚಿನ್ನಬೆಳ್ಳಿ ಕಳ್ಳಸಾಗಣಿಕೆ ಪ್ರಕರಣದಲ್ಲಿ ಬಂಧನದಲ್ಲಿರುವ ಸ್ವಪ್ನ ಸುರೇಶ್‌ ಹೇಳಿದ್ದಾರೆ ಕೇರಳ ಹೈಕೋರ್ಟ್ ಗೆ ಸುಮಿತ್ ಮಾಹಿತಿ ನೀಡಿದ್ದಾರೆ.

ಪಿಣರಾಯಿ ವಿಜಯನ್ ಮಾತ್ರವಲ್ಲ ಕೇರಳ ವಿಧಾನಸಭೆಯ ಸ್ಪೀಕರ್, ವಿಜಯನ್ ಸಂಪುಟದ ಇನ್ನೂ ಮೂವರು ಸಚಿವರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ವಪ್ನ ಸುರೇಶ ಹೇಳಿದ್ದಾರೆಂದು ಸುಮಿತ್ ಕೋರ್ಟ್‌ಗೆ ತಿಳಿಸಿದ್ದಾರೆ.

ಅಲ್ಲದೆ ಪಿಣರಾಯಿ ವಿಜಯನ್ ಹಾಗೂ ಅವರ ಮಾಜಿ ಕಾರ್ಯದರ್ಶಿ ಶಿವಶಂಕರ್‌, ವೈಯಕ್ತಿಕ ಸಿಬ್ಬಂದಿ ಜತೆಗೆ ನಿಕಟ ಸಂಬಂಧ ಇತ್ತು ಎಂದು ಸ್ವಪ್ನ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ