NEWSದೇಶ-ವಿದೇಶರಾಜಕೀಯ

ಅಮೆರಿಕ ಅಧ್ಯಕ್ಷ ಜೋ ಬೈಡನ್ ಶೃಂಗಸಭೆಯ ಆಹ್ವಾನ ಸ್ವೀಕರಿಸಿದ ಮೋದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡೆಸುವ ನಾಯಕರ ವರ್ಚುವಲ್ ಹವಾಮಾನ ಶೃಂಗಸಭೆಯ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಪ್ರಿಲ್ 22 ಮತ್ತು 23ರಂದು ನಡೆಯಲಿರುವ ನಾಯಕರ ವರ್ಚುವಲ್ ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಮೋದಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಭೆಯು ಇಂಧನ ಮತ್ತು ಹವಾಮಾನದ ಕುರಿತು ನಡೆಯಲಿರುವ ಪ್ರಮುಖ ಆರ್ಥಿಕ ಸಮಾಲೋಚನೆಗೆ ವೇದಿಕೆಯಾಗಲಿದೆ ಎಂದು ವಿವರಿಸಿದ್ದಾರೆ.

ನಾಯಕರ ವರ್ಚುವಲ್ ಹವಾಮಾನ ಶೃಂಗಸಭೆಯು ಆನ್‍ಲೈನ್ ಮೂಲಕ ಏಪ್ರಿಲ್ 22 ಮತ್ತು 23ರಂದು ನಡೆಯಲಿದೆ. ಜಾನ್ ಕರ್ರಿ ಏಪ್ರಿಲ್ 5 ರಿಂದ 8ರ ವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಅಮೆರಿಕದ ಅಧ್ಯಕ್ಷ ಬೈಡನ್ ಅವರ ಹವಾಮಾನ ಶೃಂಗಸಭೆಗೆ ಪೂರಕವಾದ ಮಾಹಿತಿಯನ್ನು ಕಲೆ ಹಾಕಲಿದ್ದಾರೆ.

ಈ ಹಿಂದೆ ಭಾರತದಲ್ಲಿ ಹವಾಮಾನ ಕುರಿತು ಮಹತ್ವದ ಸಭೆ ನಡೆದಿತ್ತು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಬೈಡನ್ ಅವರು ಈಗಾಗಲೇ ಮೋದಿಸಹಿತ ಒಟ್ಟು 40 ವಿವಿಧ ರಾಷ್ಟ್ರಗಳ ನಾಯಕರನ್ನು ಈ ಸಭೆಗಾಗಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ಶ್ವೇತಭವನದಿಂದ ವರದಿಯಾಗಿದೆ.

ಎರಡು ದಿನಗಳ ಈ ಸಭೆಯಲ್ಲಿ ಅಮೆರಿಕಾ 2030ರ ವೇಳೆಗೆ ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ಕಡಿಮೆ ಮಾಡುವ ತನ್ನ ಗುರಿಯ ಕುರಿತು ಎಲ್ಲಾ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...