NEWSದೇಶ-ವಿದೇಶ

ಉತ್ತರ ಕೊರಿಯಾದಲ್ಲಿ ಒಂದೇ ಒಂದು ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ: ವಿಶ್ವ ಆರೋಗ್ಯ ಸಂಸ್ಥೆಗೆ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಸಿಯೋಲ್: ವಿಶ್ವ ಆರೋಗ್ಯ ಸಂಸ್ಥೆಗೆ ನಮ್ಮ ದೇಶದಲ್ಲಿ ಈವರೆಗೂ ಒಂದೇ ಒಂದು ಕೊರೊನಾ ಪ್ರಕರಣಗಳು ದಾಖಲಾಗಿಲ್ಲ ಎಂದು ದೇಶವೊಂದು ಮಾಹಿತಿ ನೀಡಿದ್ದು ಆಶ್ಚರ್ಯವನ್ನುಂಟು ಮಾಡಿದೆ.\

ಹೌದು! ಏಪ್ರಿಲ್‌ನಿಂದ ಈ ವರೆಗೂ ಉತ್ತರ ಕೊರಿಯಾದಲ್ಲಿ 25,986 ಜನರನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ ಒಂದೇ ಒಂದೂ ಸೋಂಕು ಪ್ರಕರಣ ಪತ್ತೆಯಾಗಿಲ್ಲ ಎಂದು ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆಡಳಿತವಿರುವ ಉತ್ತರ ಕೊರಿಯಾ ತಿಳಿಸಿದೆ.

ಏಪ್ರಿಲ್ 23-29ರ ಅವಧಿಯಲ್ಲಿ ಪರೀಕ್ಷಿಸಲಾದ 751 ಜನರ ಪೈಕಿ 139 ಜನರಿಗೆ ಇನ್ಫ್ಲುಯೆನ್ಸ ಮಾದರಿಯ ರೋಗ ಲಕ್ಷಣಗಳು ಅಥವಾ ತೀವ್ರ ಉಸಿರಾಟದ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ ಇದು ಕೊರೊನಾ ಸೋಂಕು ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಉತ್ತರ ಕೊರಿಯಾ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ಇಡೀ ಜಗತ್ತೇ ಮಾರಕ ಕೊರೊನಾ ಸೋಂಕಿನಿಂದ ತತ್ತರಿಸುತ್ತಿದ್ದು, ಸೋಂಕಿತರ ನಿರ್ವಹಣೆ ಸಾಧ್ಯವಾಗದೇ ಪರದಾಡುತ್ತಿವೆ, ಈ ಸಮಯದಲ್ಲಿ ಈ ದೇಶದಲ್ಲಿ ಒಂದೇ ಒಂದು ಸೋಂಕು ಪ್ರಕರಣವಿಲ್ಲವೇ!? ಎಂದು ಆಶ್ಚರ್ಯಕರ ಪ್ರಶ್ನೆ ಮೂಡುವುದು ಸಹಜ.

ಆದರೆ, ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆಡಳಿತವಿರುವ ಉತ್ತರ ಕೊರಿಯಾದಲ್ಲಿ ಒಂದೇ ಒಂದು ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂಬ ಬಗ್ಗೆ ಉತ್ತರ ಕೊರಿಯಾ ಸರ್ಕಾರವೇ ವಿಶ್ವ ಆರೋಗ್ಯ ಸಂಸ್ಥೆಗೆ ಮಾಹಿತಿ ನೀಡಿದೆ.

ಜಗತ್ತಿನಲ್ಲಿ ಮೊದಲು ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದೇ ಚೀನಾದಲ್ಲಿ. ಹೀಗಿರುವಾಗ ಉತ್ತರ ಕೊರಿಯಾದಲ್ಲಿ ಸೋಂಕಿತರು ಇಲ್ಲ ಎಂಬ ಕಿಮ್ ಜಾಂಗ್ ಉನ್ ಸರ್ಕಾರದ ಹೇಳಿಕೆ ಅನುಮಾನಕ್ಕೀಡಾಗಿದೆ. ಇನ್ನು ಒಂದೇ ಒಂದು ಕೊರೊನಾ ಸೋಂಕು ಇಲ್ಲ ಎಂಬ ಈ ಮಾಹಿತಿ ಕೇಳಿ ಜಗತ್ತು ಅನುಮಾನದಿಂದ ನೋಡುತ್ತಿದೆ.

ಇನ್ನು ಜಗತ್ತಿನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಉತ್ತರ ಕೊರಿಯಾ ವಿದೇಶಗರಿಗೆ ತನ್ನ ದೇಶದ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಅಲ್ಲದೆ ಪ್ರವಾಸೋದ್ಯಮ ಬಂದ್ ಮಾಡಿತ್ತು. ಈ ಹಿಂದೆ ರೋಗಲಕ್ಷಣಗಳಿರುವ ತನ್ನದೇ ದೇಶದ ಪ್ರಜೆಗಳನ್ನೂ ಕೂಡ ದೇಶ ಪ್ರವೇಶಕ್ಕೆ ನಿರ್ಬಂಧ ಹೇರಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...