Please assign a menu to the primary menu location under menu

CrimeNEWSದೇಶ-ವಿದೇಶನಮ್ಮರಾಜ್ಯ

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕರ್ನಾಟಕದವರಾದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ (61) ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ.

ಕೆಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮೋಹನ್ ಮಲ್ಲಿಕಾರ್ಜುನಗೌಡ ಶಾಂತನಗೌಡರ್ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2023ರ ಮೇ 4ರ ತನಕ ಅವರ ಸೇವಾವಧಿ ಇತ್ತು.

ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದವರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು.

ಮೇ 5- 1958ರಂದು ಜನಿಸಿದ್ದ ನ್ಯಾ. ಮೋಹನ್ ಎಂ. ಶಾಂತನಗೌಡರ್ ಸೆಪ್ಟೆಂಬರ್ 1980ರಲ್ಲಿ ವಕೀಲರಾಗಿ ಕಾರ್ಯ ಆರಂಭಿಸಿದ್ದರು. ಬೆಂಗಳೂರಿಗೆ ಆಗಮಿಸುವ ಮೊದಲು ಒಂದು ವರ್ಷ ಧಾರವಾಡದಲ್ಲಿ ಅಭ್ಯಾಸ ಮಾಡಿದ್ದರು.

2003ರಲ್ಲಿ ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2004ರಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದರು. 2016ರಿಂದ ಒಂದು ವರ್ಷ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

2017ರಲ್ಲಿ ನ್ಯಾ. ಮೋಹನ್ ಎಂ. ಶಾಂತನಗೌಡರ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ನ್ಯಾ. ಮೋಹನ್ ಎಂ. ಶಾಂತನಗೌಡರ್ ಅವರ ನಿಧನಕ್ಕೆ ರಾಜ್ಯದ ಹಲವು ಗಣ್ಯರು ಮತ್ತು ಅವರು ಹುಟ್ಟಿ ಬೆಳೆದ ಗ್ರಾಮದ ಜನರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ಅಗಲಿಕೆಯ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ