ವಿಜಯಪಥ ಸಮಗ್ರ ಸುದ್ದಿ
ನ್ಯೂ ಡೆಲ್ಲಿ: ಕೇಂದ್ರ ರಾಜ್ಯ ಮತ್ತು ಸ್ಥಳೀಯ ಆಡಳಿತ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟು ಮಾಡಿದರೆ ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುವುದಾಗಿ ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ರೋಗಿಗಳಿಗೆ ಆಮ್ಲಜನಕ ಕೊರತೆ ಉಂಟಾಗಿರುವ ಬಗ್ಗೆ ಮಹಾರಾಜ ಅಗ್ರಸೇನ್ ಆಸ್ಪತ್ರೆಯು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗಳಾದ ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿ ಅವರಿದ್ದ ಪೀಠವು ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟು ಮಾಡಿದ ವ್ಯಕ್ತಿಯ ಬಗ್ಗೆ ತಿಳಿಸಿ ಎಂದು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.
ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟು ಮಾಡುವ ಯಾರೊಬ್ಬರನ್ನು ಬಿಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದು, ಅಂತಹ ಸ್ಥಳೀಯ ಅಧಿಕಾರಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ ಕೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿತು.