Vijayapatha – ವಿಜಯಪಥ
Saturday, November 2, 2024
CrimeNEWSದೇಶ-ವಿದೇಶ

ರೈಲುಗಳ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಲಾಹೋರ್: ಇಂದು ಬೆಳಗ್ಗೆ ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಎಕ್ಸ್​ಪ್ರೆಸ್ ಟ್ರೈನ್​ಗೆ ಡಿಕ್ಕಿ ಹೊಡೆದ ಪರಿಣಾಮ 30ಕ್ಕೂ ಮಂದಿ ಮೃತಪಟ್ಟಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಲಾಹೋರ್ ಕಡೆಗೆ ಹೊರಟಿದ್ದ ಸರ್​ ಸಯ್ಯದ್ ಎಕ್ಸ್​ಪ್ರೆಸ್ ಟ್ರೈನ್ (Sir Syed Express), ಮಿಲಾತ್​ ಎಕ್ಸ್​ಪ್ರೆಸ್ ಟ್ರೈನ್ ನಡುವೆ ಅಪಘಾತ ಸಂಭವಿಸಿದೆ. ಘೋಟ್ಕಿ (Ghotki) ಸಮೀಪ ರೇತಿ ಮತ್ತು ಧರ್ಕಿ ರೈಲ್ವೆ ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಮಿಲಾತ್​ ಎಕ್ಸ್​ಪ್ರೆಸ್ (Millat Express) ಟ್ರೈನ್ ಕರಾಚಿಯಿಂದ ಸರಗೋಢಾ ಕಡೆಗೆ ತೆರಳುತ್ತಿತ್ತು.

ಮಿಲಾತ್​ ಎಕ್ಸ್​ಪ್ರೆಸ್ ಟ್ರೈನಿನ 13 ಬೋಗಿಗಳು ಹಳಿ ತಪ್ಪಿದ್ದು, 8 ಬೋಗಿಗಳು ನಜ್ಜುಗುಜ್ಜಾಗಿವೆ. ಅಪಘಾತಕ್ಕೆ ತುತ್ತಾದ ಟ್ರೈನ್​ಗಳ ಅವಶೇಷಗಳಲ್ಲಿ ಹತ್ತಾರು ಮಂದಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಕಷ್ಟಸಾಧ್ಯವಾಗಿದೆ ಎಂದು ಸ್ಥಳಕ್ಕೆ ದೌಡಾಯಿಸಿದ ಉನ್ನತಾಧಿಕಾರಿಗಳು ಹೇಳಿದ್ದಾರೆ. ಪಾಕಿಸ್ತಾನ್​ ರೇಂಜರ್ಸ್​ ಸಿಂಧ್​ಗೆ ಸೇರಿದ ಭದ್ರತಾ ಪಡೆಗಳು (Pakistan Rangers Sindh) ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

ಸಿಂಧ್​ ಪ್ರಾಂತ್ಯದ ಘೋಟ್ಕಿ ಜಿಲ್ಲೆಯ ಧರ್ಕಿ ನಗರದಲ್ಲಿ ಈ ಪ್ರಮುಖ ದುರಂತ ನಡೆದಿದ್ದು, ಘೋಟ್ಕಿ, ಧರ್ಕಿ, ಒಬಾರೋ ಮತ್ತು ಮಿರ್ಪುರ್ ಮಥೆಲೋ ಆಸ್ಪತ್ರೆಗಳಲ್ಲಿ ಎಮೆರ್ಜೆನ್ಸಿ ಘೋಷಣೆ ಮಾಡಲಾಗಿದೆ.

ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಘೋಟ್ಕಿಯ ಜಿಲ್ಲಾಧಿಕಾರಿ ಉಸ್ಮಾನ್​ ಅಬ್ದುಲ್ಲಾ ತಿಳಿಸಿದ್ದಾರೆ.

ಉರುಳಿ ಬಿದ್ದ ಬೋಗಿಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. 13 ರಿಂದ 14 ಬೋಗಿಗಳು ಹಳಿತಪ್ಪಿದ್ದು, ಅವುಗಳಲ್ಲಿ 6-8 ಬೋಗಿಗಳು ಸಂಪೂರ್ಣ ನಾಶವಾಗಿವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ