ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ದೇಶಾದ್ಯಂತ ತೀವ್ರ ಕೂತುಹಲ ಕೆರೆಳಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸದ್ಯದ ವರದಿ ಪ್ರಕಾರ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 202ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆಯತ್ತ ದಾಪುಗಾಲಿಟ್ಟಿದೆ.
ಈ ಬಾರಿ ಅಧಿಕಾರಕ್ಕೆ ಏರುತ್ತೇವೆ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದ್ದ ಬಿಜೆಪಿ ಟಿಎಂಸಿಯ ಅರ್ಧದಷ್ಟು ಸ್ಥಾನಗಳಲ್ಲಿಯೂ ಮುನ್ನಡೆ ಸಾಧಿಸಲಾಗದೆ, 88 ಸ್ಥಾನಗಳಿಗೆ ಕುಸಿದಿದೆ. ಈ ಮೂಲಕ ತೀವ್ರ ಕುತೂಹಲವು ಮೂಡಿದೆ.
294 ಕ್ಷೇತ್ರಗಳ ಪಶ್ಚಿಮ ಬಂಗಾಳದಲ್ಲಿ ಸರಳ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಸದ್ಯದ ಮತ ಎಣಿಕೆ ಪ್ರಕಾರ ಟಿಎಂಸಿ 202 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಸುರಕ್ಷಿತವಾಗಿದೆ.
ಆದರೆ, ಗೆದ್ದೆ ಗೆಲ್ಲುತ್ತೇವೆ ಎಂಬ ಭರವಸೆಯಲ್ಲಿದ್ದ ಬಿಜೆಪಿಗೆ ತೀವ್ರ ನಿರಾಶೆಯಾಗಿದೆ. ಆದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 3 ಸ್ಥಾನಗಳಲ್ಲಿ ಜಯಗಳಿಸಿತ್ತು. ಅದಕ್ಕೆ ಹೋಲಿಸಿಕೊಂಡರೆ ಈಗ ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ.
ಟಿಎಂಸಿ ಉತ್ತಮ ಸಾಧನೆ ಮಾಡಿದರೂ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ 5 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದರು. ಆದರೆ ಸದ್ಯದ ಮತ ಎಣಿಕೆ ಪ್ರಕಾರ ನೇರಾನೇರ ಪೈಪೋಟಿ ಏರ್ಪಟ್ಟಿದೆ.