Breaking NewsNEWSದೇಶ-ವಿದೇಶ

ಯೋಗ ಗುರು ಬಾಬಾ ರಾಮ್‍ದೇವ್‌ಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ಜಾರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಅಲೋಪತಿ ಔಷಧ ಕುರಿತು ಯೋಗ ಗುರು ಬಾಬಾ ರಾಮ್‍ದೇವ್ ನೀಡಿದ ಹೇಳಿಕೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ಉತ್ತರಾಖಂಡ್ ವಿಭಾಗ ಬರೋಬ್ಬರಿ 1 ಸಾವಿರ ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದೆ.

ಬಾಬಾ ರಾಮ್‍ದೇವ್ ಅವರು ತಮ್ಮ ಹೇಳಿಕೆ ಕುರಿತು ವಿಡಿಯೋ ಪೋಸ್ಟ್ ಮಾಡಬೇಕು ಹಾಗೂ 15 ದಿನಗಳೊಳಗೆ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ 1000 ಕೋಟಿ ರೂ.ಗಳ ಬೇಡಿಕೆ ಇಡುತ್ತೇವೆ ಎಂದು ಐಎಂಎ ನೋಟಿಸ್‍ನಲ್ಲಿ ತಿಳಿಸಿದೆ. ಅಲ್ಲದೆ ಐಎಂಎ ಪರವಾಗಿ ರಾಮ್‍ದೇವ್ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಲಾಗಿದೆ ಎಂದು ಉತ್ತರಾಖಂಡ್ ವಿಭಾಗದ ಅಧ್ಯಕ್ಷ ಡಾ.ಅಜಯ್ ಖನ್ನಾ ಹೇಳಿದ್ದಾರೆ.

ಸೋಮವಾರ ಐಎಂಎನ ಉತ್ತರಾಖಂಡ್ ವಿಭಾಗ ಬಾಬಾ ರಾಮ್‍ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿತ್ತು.

ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಪತ್ರದ ಬಳಿಕ ಬಾಬಾ ರಾಮ್‍ದೇವ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಸೋಮವಾರ ಐಎಂಎಗೆ 25 ಪ್ರಶ್ನೆಗಳನ್ನು ಕೇಳಿದ್ದ ಅವರು, ಅಧಿಕ ರಕ್ತದೊತ್ತಡ(ಬಿಪಿ) ಹಾಗೂ ಟೈಪ್-1, ಟೈಪ್-2 ಮಧುಮೇಹ ಸೇರಿದಂತೆ ಮುಂತಾದ ಕಾಯಿಲೆಗಳಿಗೆ ಅಲೋಪತಿ ಶಾಶ್ವತ ಪರಿಹಾರ ನೀಡುತ್ತದೆಯೇ ಎಂದು ಅವರು ಪ್ರಶ್ನಿಸಿದ್ದರು. ಅಲ್ಲದೆ ಥೈರಾಯ್ಡ್, ಸಂಧಿವಾತ, ಕೊಲೈಟಿಸ್ ಹಾಗೂ ಅಸ್ತಮಾಗೆ ಫಾರ್ಮಾ ಉದ್ಯಮದಲ್ಲಿ ಶಾಶ್ವತ ಚಿಕಿತ್ಸೆ ಇದೆಯೇ ಎಂದಿದ್ದರು.

ಟಿಬಿ ಹಾಗೂ ದಡಾರಗೆ ನೀವು ಪರಿಹಾರ ಕಂಡುಕೊಂಡಂತೆ, ಲಿವರ್‌ಗೆ ಸಂಬಂಧಿಸಿದ ಕಾಯಿಲೆಗಳತ್ತ ಸಹ ಗಮನ ಹರಿಸಿ ಎಂದಿದ್ದರು. ಇದೆಲ್ಲದರ ಬಳಿಕ ಅಲೋಪತಿಗೆ ಈಗ 200 ವರ್ಷಗಳು. ಅಲ್ಲದೆ ಅಲೋಪತಿ ಸರ್ವಶಕ್ತ ಮತ್ತು ‘ಸರ್ವಗುಣ ಸಂಪನ್ನ’ ಎನ್ನುವುದಾದರೆ ವೈದ್ಯರು ಅನಾರೋಗ್ಯಕ್ಕೆ ಒಳಗಾಗಬಾರದು ಎಂದು ಯೋಗ ಗುರು ಹೇಳಿದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ