ನ್ಯೂಡೆಲ್ಲಿ: ಕೇಂದ್ರ ಸಂಪುಟ ಪುನರ್ ರಚನೆಯಲ್ಲಿ 11 ಸಚಿವರಿಗೆ ಕೊಕ್ ನೀಡಲಾಗಿದ್ದು, ಹೊಸದಾಗಿ 43 ಹೊಸ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಹೆಚ್ಚಿನ ಸಂಖ್ಯೆಯ ಎಸ್ ಸಿ, ಎಸ್‌ಟಿ ಪ್ರತಿನಿಧಿಸುವ ಸಂಸದರು ಸೇರಿದಂತೆ 43 ಹೊಸ ಸದಸ್ಯರು ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟ ಸೇರುತ್ತಿದ್ದಾರೆ.
ಸಂಪುಟ ಪುನರ್ ರಚನೆ ನಂತರ ಪರಿಶಿಷ್ಟ ಸಮುದಾಯದಿಂದ 12 ಸದಸ್ಯರು ಮತ್ತು ಪರಿಶಿಷ್ಟ ಪಂಗಡದಿಂದ 8 ಸದಸ್ಯರು ಸಂಪುಟ ಸೇರುತ್ತಿದ್ದಾರೆ.
ಡಿ.ವಿ.ಸದಾನಂದ ಗೌಡ, ಡಾ. ಹರ್ಷವರ್ಧನ್, ರಾವು ಸಾಹೇಬ್ ದಾನ್ವೆ ಪಾಟೀಲ್, ಬಾಬುಲ್ ಸುಪ್ರಿಯೋ, ಪ್ರತಾಪ್ ಸಾರಂಗಿ, ರಮೇಶ್ ಪೋಖ್ರಿಯಾಲ್, ದೇಬಾಶ್ರೀ ಚೌಧುರಿ, ಸಂತೋಷ್ ಗಂಗ್ವಾರ್, ತಾವರ್ ಚಂದ್ ಗೆಹ್ಲೋಟ್, ಸಂಜಯ್ ಶಮರಾವ್ ಧೋತ್ರೆ ಮತ್ತು ರತ್ತನ್ ಲಾಲ್ ಕಟಾರಿಯಾ ಸೇರಿದಂತೆ 11 ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ.
43 leaders to take oath today in the Union Cabinet expansion. Jyotiraditya Scindia, Pashupati Kumar Paras, Bhupender Yadav, Anupriya Patel, Shobha Karandlaje, Meenakshi Lekhi, Ajay Bhatt, Anurag Thakur to also take the oath. pic.twitter.com/pprtmDu4ko
— ANI (@ANI) July 7, 2021