NEWSದೇಶ-ವಿದೇಶರಾಜಕೀಯ

75ನೇ ಸ್ವಾತಂತ್ರ್ಯೋತ್ಸವ ದಿನಚರಣೆ : ಹಳ್ಳಿಗಳಲ್ಲೂ ತಯಾರಾಗುತ್ತಿದ್ದಾರೆ ಡಿಜಿಟಲ್‌ ಉದ್ಯಮಿಗಳು – ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ವಿಶ್ವಮಾರಿ ದೇಶವನ್ನು ಬಾಧಿಸುತ್ತಿರುವ ಈ ಸಮಯದಲ್ಲಿ ದೇಶ ಕೊರೊನಾ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದ್ದರ ಪರಿಣಾಮ ಇಂದು 54 ಕೋಟಿಗೂ ಹೆಚ್ಚು ಮಂದಿಗೆ ಕೊರೊನಾ ಲಸಿಕೆ ನೀಡಲು ಸಾಧ್ಯವಾಯಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ 75ನೇ ಸ್ವಾತಂತ್ರ್ಯೋತ್ಸವ ದಿನಚರಣೆ ಅಂಗವಾಗಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಬಳಿಕ ದೇಶದ ಜನರನ್ನುದ್ದೇಶಿಸಿ ಭಾಷಣ ಮಾಡಿದರು.

ಭಾರತದಲ್ಲಿ ಅತಿದೊಡ್ಡ ಕೋವಿಡ್ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಈವರೆಗೂ 54 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆಯ ಡೋಸ್ ನೀಡಲಾಗಿದೆ. ಇನ್ನು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎದು ತಿಳಿಸಿದರು.

ಇನ್ನು ಕೋವಿಡ್ ಸಮಯದಲ್ಲಿ, ನಮ್ಮ ವೈದ್ಯರು, ದಾದಿಯರು, ಪ್ಯಾರಾಮೆಡಿಕಲ್ ಸಿಬ್ಬಂದಿ, ನೈರ್ಮಲ್ಯ ಕೆಲಸಗಾರರು, ವಿಜ್ಞಾನಿಗಳು ಮತ್ತು ಕೋಟ್ಯಂತರ ನಾಗರಿಕರು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. ಈ ಅವಧಿಯಲ್ಲಿ ಇತರರ ಸೇವೆಗಾಗಿ ಪ್ರತಿ ಕ್ಷಣವನ್ನೂ ಮೀಸಲಿಟ್ಟವರು ನಮ್ಮ ಮೆಚ್ಚುಗೆಗೆ ಅರ್ಹರು ಎಂದು ಕೊರೊನಾ ವಾರಿಯರ್ಸ್‍ಗಳ ಸೇವೆಯನ್ನು ಶ್ಲಾಘಿಸಿದರು.

ಇಂದು ನಮ್ಮ ಹಳ್ಳಿಗಳು ವೇಗವಾಗಿ ಬದಲಾಗುತ್ತಿರುವುದನ್ನು ನಾವು ನೋಡುತ್ತೇವೆ. ಕಳೆದ ಕೆಲವು ವರ್ಷಗಳಲ್ಲಿ, ರಸ್ತೆ ಮತ್ತು ವಿದ್ಯುತ್‍ನಂತಹ ಸೌಲಭ್ಯಗಳು ಹಳ್ಳಿಗಳನ್ನು ತಲುಪಿವೆ. ಇಂದು, ಆಪ್ಟಿಕಲ್ ಫೈಬರ್ ನೆಟ್ವರ್ಕ್ ಹಳ್ಳಿಗಳಿಗೆ ಡೇಟಾ ಶಕ್ತಿಯನ್ನು ಒದಗಿಸುತ್ತದೆ, ಇಂಟರ್ನೆಟ್ ಅಲ್ಲಿಗೆ ತಲುಪುತ್ತಿದೆ. ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿ, ನಾವು ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. 100 ಲಕ್ಷ ಕೋಟಿ ರಾಷ್ಟ್ರೀಯ ಮೂಲಸೌಕರ್ಯ ಮಾಸ್ಟರ್ ಪ್ಲಾನ್ ಇದಾಗಿದ್ದು, ಈ ಯೋಜನೆ ಸಮಗ್ರ ಮೂಲಸೌಕರ್ಯಕ್ಕೆ ಅಡಿಪಾಯವನ್ನು ನೀಡುತ್ತದೆ ಎಂದು ತಿಳಿಸಿದರು.

ಇದಿಷ್ಟೇ ಅಲ್ಲದೆ ಇದರ ಜೊತೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಯದಲ್ಲಿ 75 ವಂದೇ ಭಾರತ್ ರೈಲುಗಳು 75 ವಾರಗಳಲ್ಲಿ ಭಾರತದ ಮೂಲೆ ಮೂಲೆಯನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು.

21 ನೇ ಶತಮಾನದಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಇದಕ್ಕಾಗಿ, ನಾವು ಹಿಂದುಳಿದಿರುವ ವಿಭಾಗ, ಹಿಂದುಳಿದಿರುವ ಪ್ರದೇಶವನ್ನು ಕೈ ಹಿಡಿಯಬೇಕು ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಲಿಮಿಟೇಶನ್ ಕಮಿಷನ್ ಅನ್ನು ರಚಿಸಲಾಗಿದೆ ಮತ್ತು ಭವಿಷ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಒಂದೆಡೆ ಲಡಾಖ್ ಆಧುನಿಕ ಮೂಲಸೌಕರ್ಯಗಳ ಸೃಷ್ಟಿಗೆ ಸಾಕ್ಷಿಯಾಗಿದ್ದರೆ, ಮತ್ತೊಂದೆಡೆ ಇಂಡಸ್ ಸೆಂಟ್ರಲ್ ಯೂನಿವರ್ಸಿಟಿ ಲಡಾಖ್ ಅನ್ನು ಉನ್ನತ ಶಿಕ್ಷಣದ ಕೇಂದ್ರವನ್ನಾಗಿಸುತ್ತದೆ ಎಂದರು.

ಕಳೆದ 7 ವರ್ಷಗಳಲ್ಲಿ ಆರಂಭವಾದ ಅನೇಕ ಯೋಜನೆಗಳ ಪ್ರಯೋಜನಗಳು ಕೋಟ್ಯಂತರ ಬಡವರ ಮನೆಬಾಗಿಲನ್ನು ತಲುಪಿವೆ. ಇಂದು ಸರ್ಕಾರದ ಯೋಜನೆಗಳು ವೇಗವನ್ನು ಪಡೆದುಕೊಂಡಿವೆ ಮತ್ತು ಅವುಗಳ ಗುರಿಗಳನ್ನು ತಲುಪುತ್ತಿವೆ ಎಂದು ವಿವರಿಸಿದರು.

ಜನೌಷಧಿ ಯೋಜನೆಯಡಿ ಬಡವರು ಮತ್ತು ನಿರ್ಗತಿಕರಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಸಿಗುತ್ತಿವೆ. ಇಲ್ಲಿಯವರೆಗೆ 75 ಸಾವಿರಕ್ಕೂ ಕ್ಕೂ ಹೆಚ್ಚು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಈಗ ನಾವು ಆಧುನಿಕ ಪ್ರಯೋಗಾಲಯಗಳು ಮತ್ತು ಬ್ಲಾಕ್ ಮಟ್ಟದಲ್ಲಿ ಉತ್ತಮ ಆಸ್ಪತ್ರೆಗಳನ್ನು ನಿರ್ಮಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಟೋಕಿಯೋ ಒಲಿಂಪಿಕ್ಸ್ ನಲ್ಲಿ ನಮಗೆ ಹೆಮ್ಮೆ ತಂದ ಕ್ರೀಡಾಪಟುಗಳು ಇಂದು ನಮ್ಮ ನಡುವೆ ಇದ್ದಾರೆ. ಅವರು ನಮ್ಮ ಹೃದಯವನ್ನು ಗೆಲ್ಲುವುದರ ಜೊತೆಗೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ಆಗಿದ್ದಾರೆ ಎಂದು ಹೇಳಿದರು.

ಮುಂದಿನ ತಲೆಮಾರಿನ ಮೂಲಸೌಕರ್ಯ, ವಿಶ್ವ ದರ್ಜೆಯ ತಯಾರಿಕೆ, ಹೊಸತನ ಮತ್ತು ಹೊಸ ಯುಗದ ತಂತ್ರಜ್ಞಾನಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ