NEWSದೇಶ-ವಿದೇಶ

ಇಂದು ನ್ಯಾ.ನಾಗರತ್ನ ಸೇರಿ ಸುಪ್ರೀಂ ಕೋರ್ಟ್​ ನ್ಯಾಯಾಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ 9 ನ್ಯಾಯಮೂರ್ತಿಗಳು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮೊನ್ನೆಯಷ್ಟೇ ದೇಶದ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಕರ್ನಾಟಕದವರಾದ, ರಾಜ್ಯ ಹೈಕೋರ್ಟ್‌ ನ್ಯಾಯಾಧೀಶರಾಗಿದ್ದ ನಾಗರತ್ನ ಬಿ.ವಿ. ಸೇರಿ ಮೂವರು ಮಹಿಳಾ ನ್ಯಾಯಮೂರ್ತಿಗಳೂ ಒಳಗೊಂಡಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.

ಈ ಪೈಕಿ ಸುಪ್ರೀಂ ಕೋರ್ಟ್​ ನ್ಯಾಯಾಮೂರ್ತಿ​ ಬಿ.ವಿ. ನಾಗರತ್ನ ಅವರ ಹೆಸರು ದೇಶದಾದ್ಯಂತ ಸದ್ದು ಮಾಡುತ್ತಿದೆ. ಏಕೆಂದರೆ ಸ್ವತಂತ್ರ್ಯ ಭಾರತದಲ್ಲಿ ಈವರೆಗೆ ದೇಶದ ಪರಮೋಚ್ಛ ನ್ಯಾಯಾಲಯಕ್ಕೆ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿಗಳಾದ ಇತಿಹಾಸವೇ ಇಲ್ಲ. ಇದೇ ಮೊದಲ ಬಾರಿಗೆ ಜಸ್ಟೀಸ್​ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯನ್ಯಾಯಮೂರ್ತಿಯಾಗಿ ಹೊಸ ಇತಿಹಾಸ ಸೃಷ್ಟಿಸುವ ಸಾಧ್ಯತೆಗಳು ದಟ್ಟವಾಗಿವೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಹಿರಿಯರನ್ನು ಮುಖ್ಯ ನ್ಯಾಯಮೂರ್ತಿಗಳಾಗುತ್ತಾರೆ. ಇದು ಈವರೆಗೆ ನಡೆದುಕೊಂಡು ಬಂದಿರುವ ಪರಿಪಾಠ. ಇದೇ ರೀತಿ ಸದ್ಯ ಹಿರಿಯ ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌, ಚಂದ್ರಚೂಡ್‌, ಸಂಜೀವ್‌ ಖನ್ನಾ, ಸೂರ್ಯಕಾಂತ್‌ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

ಈ ಪೈಕಿ ಕಡೆಯವರಾದ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರ ಅವಧಿ ಮುಗಿದ ಬಳಿಕ 2027ರಲ್ಲಿ ಹಿರಿತನದ ಆಧಾರದಲ್ಲಿ ಕರ್ನಾಟಕ ಮೂಲದ ನ್ಯಾಯಮೂರ್ತಿ ನಾಗರತ್ನ ಬಿ.ವಿ. ಅವರಿಗೆ ಮುಖ್ಯ ನ್ಯಾಯಮೂರ್ತಿ ಆಗುವ ಸುಯೋಗ ಕೂಡಿಬರಲಿದೆ. ಹಾಗಾದರೆ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಾಮೂರ್ತಿಯಾದ ದಾಖಲೆ ನಿರ್ಮಿಸಲಿದ್ದಾರೆ.

ಅಲ್ಲದೆ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ, ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ, ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೊಧಿಸಿದರು.

ಜಸ್ಟೀಸ್​ ಬಿ.ವಿ. ನಾಗರತ್ನ ಪರಿಚಯ: ಬಿ.ವಿ. ನಾಗರತ್ನ ಅವರನ್ನು ಫೆಬ್ರವರಿ 18, 2008ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿತ್ತು. ಎರಡು ವರ್ಷಗಳ ನಂತರ ಕಾಯಂ ನ್ಯಾಯಾಧೀಶರನ್ನಾಗಿ ಮಾಡಲಾಗಿತ್ತು. ಆದರೆ ನ್ಯಾಯಾಧೀಶರಾಗಿ ತಮ್ಮ 13 ವರ್ಷಗಳ ಸುದೀರ್ಘ ಅವಧಿಯಲ್ಲಿ ನ್ಯಾಯಮೂರ್ತಿ ನಾಗರತ್ನ ಅವರು ಮಾಧ್ಯಮಗಳನ್ನು ಮತ್ತು ವಕೀಲರನ್ನು ಕೋರ್ಟ್​ನಲ್ಲಿನ ಅವರ ಮಿತಿ ಮೀರಿದ ವರ್ತನೆಯ ಬಗ್ಗೆ ಎಂದಿಗೂ ಚಕಾರ ಎತ್ತಿಲ್ಲ ಎಂಬ ಮಾತೂ ಇದೆ.

ನವೆಂಬರ್ 2009ರಲ್ಲಿ ಕರ್ನಾಟಕದ ಅಂದಿನ ಮುಖ್ಯ ನ್ಯಾಯಾಧೀಶರಾದ ಪಿ.ಡಿ. ದಿನಕರನ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲೇ ಪ್ರತಿಭಟಿಸಿದ್ದ ವಕೀಲರು, ಭ್ರಷ್ಟಾಚಾರ ಆರೋಪದಲ್ಲಿ ನ್ಯಾಯಾಲಯದ ವಿಚಾರಣೆಗೆ ಅಡ್ಡಿಪಡಿಸಲು ಯತ್ನಿಸಿದರು. ಅಲ್ಲದೆ ಅಂದಿನ ನ್ಯಾಯಾಧೀಶರಾದ ವಿ. ಗೋಪಾಲಗೌಡ ಮತ್ತು ಬಿ.ವಿ. ನಾಗರತ್ನ ಅವರನ್ನು ನ್ಯಾಯಾಲಯದ ಕೋಣೆಯಲ್ಲಿ ಬಂಧಿಸಿಟ್ಟಿದ್ದರು.

ಈ ಬಗ್ಗೆ ಆಗ ಮಾತನಾಡಿದ್ದ ಜಸ್ಟೀಸ್​ ಬಿ.ವಿ. ನಾಗರತ್ನ ವಕೀಲರ ಇಂತಹ ವರ್ತನೆ ಬಗ್ಗೆ ನಮಗೆ ಕೋಪವಿಲ್ಲ, ಆದರೆ ಬಾರ್ ಕೌನ್ಸಿಲ್ ನಮಗೆ ಹೀಗೆ ಮಾಡಿರುವುದು ದುಃಖಕರವಾಗಿದೆ. ನಾಚಿಕೆಯಿಂದ ನಾವು ತಲೆ ತಗ್ಗಿಸಿಕೊಳ್ಳಬೇಕು. ನಾವು ಬಾರ್‌ ಕೌನ್ಸಿಲ್ ಆಜ್ಞೆಯ ಮೇರೆಗೆ ಕೆಲಸ ಮಾಡಬೇಕು ಮತ್ತು ಅದರ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿಕೆ ನೀಡಿದ್ದರು.

ಅಕ್ಟೋಬರ್ 30, 1962 ರಂದು ಜನನ: ಅಕ್ಟೋಬರ್ 30, 1962 ರಂದು ಜನಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ಅಕ್ಟೋಬರ್ 28, 1987ರಂದು ಬೆಂಗಳೂರಿನಲ್ಲಿ ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ವೃತ್ತಿ ಬದುಕನ್ನು ಆರಂಭಿಸಿದರು.

ಈ ವೇಳೆ ಅವರು ಸಾಂವಿಧಾನಿಕ ಕಾನೂನು, ವಾಣಿಜ್ಯ ಕಾನೂನು, ವಿಮಾ ಕಾನೂನು, ಸೇವಾ ಕಾನೂನು, ಆಡಳಿತಾತ್ಮಕ ಮತ್ತು ಸಾರ್ವಜನಿಕ ಕಾನೂನು, ಭೂಮಿ ಮತ್ತು ಬಾಡಿಗೆಗೆ ಸಂಬಂಧಿಸಿದ ಕಾನೂನು, ಕೌಟುಂಬಿಕ ಕಾನೂನು, ಒಪ್ಪಂದಗಳು ಮತ್ತು ಒಪ್ಪಂದಗಳ ತಿಳುವಳಿಕೆ ಕಾನೂನುಗಳ ಬಗ್ಗೆ ಸಾಕಷ್ಟು ಅಧ್ಯಯನ ನಡೆಸುವ ಮೂಲಕ ಹೆಸರುವಾಸಿಯಾಗಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು