CrimeNEWSದೇಶ-ವಿದೇಶ

ಕೆಥೊಲಿಕ್ ಪಾದ್ರಿಗಳ ದೊಡ್ಡ ಸೆಕ್ಸ್ ಸ್ಕ್ಯಾಂಡಲ್​: 368 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ!

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೆಥೊಲಿಕ್ ಪಾದ್ರಿಗಳು ದೊಡ್ಡದೊಂದು ಸೆಕ್ಸ್ ಸ್ಕ್ಯಾಂಡಲ್​ನಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಕಳೆದ 30 ತಿಂಗಳಲ್ಲಿ 368 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ದೂರುಗಳು ಕೇಳಿಬಂದಿವೆ.

2018ರ ಜುಲೈ 1ರಿಂದ 2020ರ ಡಿಸೆಂಬರ್ 31ರ ಅವಧಿಯಲ್ಲಿ ಇಷ್ಟೊಂದು ಪ್ರಮಾಣದ ಲೈಂಗಿಕ ದೌರ್ಜನ್ಯದ ಪ್ರಕರಣಗಳು ನಡೆದಿರುವುದು ವರದಿಯಾಗಿದೆ. ಪೋಲಂಡ್​ನಲ್ಲಿ ಕೆಥೊಲಿಕ್ ಪಾದ್ರಿಗಳಿಂದ ಇಷ್ಟೊಂದು ಲೈಂಗಿಕ ಅನಾಚರಗಳು ನಡೆದಿರುವ ಕುರಿತು ಇನ್​ಸ್ಟಿಟ್ಯೂಟ್ ಆಫ್​ ಕೆಥೊಲಿಕ್ ಚರ್ಚ್ ಸ್ಟ್ಯಾಟಿಸ್ಟಿಕ್ಸ್ ಸೋಮವಾರ ಪ್ರಕಟಿಸಿದೆ.

ದುರಂತವೆಂದರೆ ಕೆಥೊಲಿಕ್ ಪಾದ್ರಿಗಳು ದಿನಕ್ಕೊಂದು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ವರದಿಯಿಂದ ಬಹಿರಂಗೊಂಡಿದೆ.

ಹೀಗೆ ಬಂದ ರಿಪೋರ್ಟ್‌ಗಳಲ್ಲಿ ಇದು ಎರಡನೆಯದು. ಇದಕ್ಕೂ ಮೊದಲು ಇಂಥ ವರದಿ 2019ರಲ್ಲಿ ಬಿತ್ತರಗೊಂಡಿತ್ತು. ಅದರಲ್ಲಿ 1990ರ ಜನವರಿಯಿಂದ 2018ರ ಜೂನ್‌ ವರೆಗೂ 382 ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದವು.

ಎರಡೂ ವರದಿಯಲ್ಲೂ ಅರ್ಧಕ್ಕರ್ಧದಷ್ಟು ಪ್ರಕರಣಗಳು ಸಂತ್ರಸ್ತೆಯರು 15 ವರ್ಷಕ್ಕಿಂತ ಕಿರಿಯರು ಎಂಬ ಆತಂಕಕಾರಿ ಅಂಶವೂ ಬೆಳಕಿಗೆ ಬಂದಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್