NEWSದೇಶ-ವಿದೇಶರಾಜಕೀಯ

ಮಾಧ್ಯಮಗಳ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದೆ ಬಿಜೆಪಿ: ಅಣ್ಣಾಮಲೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳುನಾಡು ಜಿಜೆಪಿಯ ನಿಯೋಜಿತ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಮಾಧ್ಯಮಗಳನ್ನು ನಿಯಂತ್ರಿಸಬೇಕೆಂಬ ವಿವಾದಿತ ಹೇಳಿಕೆಯೊಂದನ್ನು ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಹೌದು ಶುಕ್ರವಾರ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಅವರು, ಮುಂದಿನ ಆರು ತಿಂಗಳಲ್ಲಿ ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದೇವೆ ಎನ್ನುವ ಮೂಲಕ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ.

ಯಾವುದೇ ಮಾಧ್ಯಮ ಸಂಸ್ಥೆ ದೀರ್ಘಕಾಲ ಸುಳ್ಳು ಹರಡುವುದು ಸಾಧ್ಯವಿಲ್ಲ. ಸುಳ್ಳುಸುದ್ದಿ ಹರಡುವುದಕ್ಕೆ ಕಡಿವಾಣ ಹಾಕಲಾಗುವುದು. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಎಲ್‌.ಮುರುಗನ್‌ ಇದೀಗ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾಗಿದ್ದಾರೆ.

ಎಲ್ಲಾ ಮಾಧ್ಯಮಗಳೂ ಅವರ ಕೈಕೆಳಗೇ ಬರುತ್ತವೆ. ಸುಳ್ಳು ಸುದ್ದಿಯನ್ನೇ ಮುಂದಿಟ್ಟುಕೊಂಡು ದೀರ್ಘಕಾಲ ರಾಜಕಾರಣ ಮಾಡುವುದು ಸಾಧ್ಯವಿಲ್ಲ ಎಂದು ಅಣ್ಣಾಮಲೈ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ರೋಡ್​ ಶೋ ವೇಳೆ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳನ್ನು ನಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳೋಣ, ಬಿಜೆಪಿ ವಿರುದ್ಧ ಸುಳ್ಳು ಮಾಹಿತಿ ನೀಡಿದರೆ ಸುಮ್ಮನೆ ಬಿಡುವುದಿಲ್ಲ, ಬಿಜೆಪಿ ಕಾರ್ಯಕರ್ತರಿಗೆ ಮಾಧ್ಯಮಗಳ ಬಗ್ಗೆ ಭಯ ಬೇಡ ಎಂದು ಬಹಿರಂಗವಾಗಿಯೇ ಹೇಳಿರುವ ಅಣ್ಣಾಮಲೈ, ಮಾಧ್ಯಮಗಳನ್ನು ಅಡಿಯಾಳುಗಳಾಗಿ ಮಾಡಿಕೊಳ್ಳುವ ರೀತಿ ಮಾತನಾಡಿದ್ದಾರೆ.

ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಅಣ್ಣಾಮಲೈ ಈ ಹಿಂದೆಯೂ ಬೇರೆ ಬೇರೆ ಹೇಳಿಕೆಗಳ ಮೂಲಕ ಕೆಲ ವಿವಾದ ಸೃಷ್ಟಿಸಿದ್ದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರವಕುರಿಚಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಣ್ಣಾಮಲೈ ಡಿಎಂಕೆ ಮುಖಂಡ ಸೆಂಥಿಲ್‌ ಬಾಲಾಜಿ ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡುವ ಧಾಟಿಯಲ್ಲಿ ಬಹಿರಂಗವಾಗಿಯೇ ಮಾತನಾಡಿದ್ದು, ಮತ್ತೆ ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಣ್ಣಾಮಲೈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದು ಮಾಧ್ಯಮಕ್ಕೆ ಬಹಿರಂಗ ಬೆದರಿಕೆ ಎಂದು ಆಡಳಿತಾರೂಢ ಡಿಎಂಕೆ ಅಭಿಪ್ರಾಯಪಟ್ಟಿದೆ. ಇದು ಮಾಧ್ಯಮವನ್ನು ಹತ್ತಿಕ್ಕುವ, ಬಹಿರಂಗವಾಗಿ ಬೆದರಿಸುವ ಕ್ರಮವಾಗಿದ್ದು, ಅಣ್ಣಾಮಲೈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಮಿಳುನಾಡಿನ ಮಾಹಿತಿ ತಂತ್ರಜ್ಞಾನ ಸಚಿವ ಮನೊ ತಂಗರಾಜ್‌ ಹೇಳಿದ್ದಾರೆ. ಅಣ್ಣಾಮಲೈ ಹೇಳಿಕೆಯನ್ನು ತಮಿಳುನಾಡು ಮಾಧ್ಯಮಗಳು ಸಹ ಖಂಡಿಸಿವೆ.

ಮೇಕೆದಾಟು ವಿಚಾರದಲ್ಲಿ ನಾವು ತಮಿಳುನಾಡು ಪರ: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಣ್ಣಾಮಲೈ, ತಮಿಳುನಾಡು ಬಿಜೆಪಿ ಘಟಕವು ಮೇಕೆದಾಟು ವಿಷಯದಲ್ಲಿ ತಮಿಳುನಾಡು ಸರ್ಕಾರದ ಪರ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ರೈತರು ಹಾಗೂ ಜನತೆಯ ಪರವಾಗಿ ತಮಿಳುನಾಡು ಬಿಜೆಪಿ ನಿಲ್ಲಲಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಅಣ್ಣಾಮಲೈ ತಮ್ಮ ನಿಲುವನ್ನು ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ