NEWSದೇಶ-ವಿದೇಶಸಂಸ್ಕೃತಿ

ಕೇರಳ ರಾಜ್ಯದ ಕೆಲ ಗ್ರಾಮಗಳ ಕನ್ನಡ ಹೆಸರು ಬದಲಾವಣೆಗೆ ಸಿಎಂ ಬಿಎಸ್‌ವೈ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಹೆಸರುಗಳನ್ನು ಹೊಂದಿದ ಕಾಸರಗೋಡು ಮತ್ತು ಮಂಜೇಶ್ವರದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಂಡಿಸಿದ್ದು, ಕೂಡಲೇ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್‌ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಹೆಸರು ಬದಲಾವಣೆ ಮಾಡುತ್ತಿರುವುದರ ಬಗ್ಗೆ ಸಿಎಂ ಗಮನಕ್ಕೆ ತಂದರು.

ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಈ ವಿಷಯ ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೂಡಲೇ ಕೇರಳ ಸರ್ಕಾರದ ಸಿಎಂ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕುತಿದ್ದಾರೆ. ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಬಿಎಸ್‌ವೈ ಭರವಸೆ ನೀಡಿದರು.

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೆಯೇ ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದು ಎಂದು ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?