NEWSದೇಶ-ವಿದೇಶರಾಜಕೀಯ

ಅಡುಗೆ ಅನಿಲ ದರ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  ಸಾರ್ವಜನಿಕರನ್ನು ಖಾಲಿಹೊಟ್ಟೆ ಯಲ್ಲಿ ಮಲಗುವಂತೆಮಾಡುತ್ತಿರುವವರು, ತಾವುಮಾತ್ರ ಸ್ನೇಹಿತರ ನೆರಳಿನಲ್ಲಿ ಮಲಗುತ್ತಿದ್ದಾರೆ ಎಂದು ಗೃಹ ಬಳಕೆಯ ಅಡುಗೆ ಅನಿಲದ ದರ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶದ ಜನರು ಒಗ್ಗಟ್ಟಿನಿಂದ ಹೋರಾಡಲಿದ್ದಾರೆ. ಇದು ನಿಮಗೆ ಎಚ್ಚರಿಕೆಯ ಗಂಟೆಯಾಗಬೇಕು. ಇನ್ನಾದರೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿ ಬಡವರ ಬದುಕನ್ನು ಹಸನಾಗಿಸಿ ಎಂದು ಅಗ್ರಹಿಸಿದ್ದಾರೆ.

“#IndiaAgainstBJPLoot” ಹ್ಯಾ ಷ್ ಟ್ಯಾ ಗ್ನೊಂದಿಗೆ ಟ್ವೀಟ್‌ ಮಾಡಿರುವ ರಾಹುಲ್ ಗಾಂಧಿ, ದೇಶದ ನಾಲ್ಕು ಮಹಾನಗರಗಳಲ್ಲಿ ಕಳೆದ ಜನವರಿಯಿಂದ ಗೃಹಬಳಕೆಯ ಎಲ್ಪಿಜಿ ದರ ಹೆಚ್ಚಿ ಸಿರುವ ಪಟ್ಟಿಯನ್ನೂ ಟ್ಯಾಗ್ ಮಾಡಿದ್ದಾರೆ.

ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ಗಳ ಮೇಲಿನ ದರ ಏರಿಕೆ ಕುರಿತು ಕೇಂದ್ರ ದ ವಿರುದ್ಧ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಇವುಗಳ ಮೇಲಿನ ತೆರಿಗೆಗಳನ್ನು ಕಡಿತಗೊಳಿಸುವಂತೆಯೂ ಒತ್ತಾಯಿಸುತ್ತಾ ಬಂದಿದೆ. ಈಗ ಪುನಃ ಎಲ್ಪಿಜಿ ದರ ಏರಿಸಿರುವುದರ ವಿರುದ್ಧ ಧ್ವನಿ ಎತ್ತಿದೆ. ಆದರೂ ಸರ್ಕಾರಕ್ಕೆ ಬಡವರ ಕೂಗು ಕೇಳಿಸುತ್ತಿಲ್ಲ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ