NEWSದೇಶ-ವಿದೇಶನಮ್ಮರಾಜ್ಯ

ತಮಿಳುನಾಡು ಕ್ಯಾತೆ ತೆಗೆದರೂ ಮೇಕೆದಾಟು ಯೋಜನೆ ಜಾರಿ ಮಾಡೇ ತೀರುತ್ತೇವೆ: ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೇಕೆದಾಟು ವಿಚಾರವಾಗಿ ತಮಿಳುನಾಡು ತೀರ್ಮಾನದ ಬಗ್ಗೆ ಮಾತು ಬೇಡ, ನಾವು ಮೇಕೆದಾಟು ಯೋಜನೆ ಜಾರಿ ಮಾಡೇ ಮಾಡುತ್ತೇವೆ ಎಂದು ಮುಖ್ಯಮಂತ್ರ ಯಡಿಯೂರಪ್ಪ
ಹೇಳಿದ್ದಾರೆ.

ಬೆಂಗಳೂರಿಗೆ ಮಂಗಳವಾರ ಆಗಮಿಸಿದ್ದ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಯಡಿಯೂರಪ್ಪ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ಬಳಿಕ ಮಾತನಾಡಿದರು.

ಆದಷ್ಟು ಬೇಗ ಕೇಂದ್ರದದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಚಿವರು ಹೇಳಿದ್ದಾರೆ. ಅಲ್ಲದೇ ಬಹಳ ಮಹತ್ವದ್ದಾಗಿ ಜಲ ಜಿವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇನ್ನು ಕೇಂದ್ರ ಸಚಿವರೊಂದಿಗೆ ರಾಜ್ಯದ ನೀರಾವರಿ ಯೊಜನೆಗಳ ಬಗ್ಗೆ ಚರ್ಚೆ ಮಾಡಿದ್ದು, ಕೃಷ್ಣಾ ಯೋಜನೆಗೆ ನೊಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು. ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಕ್ಲಿಯರನ್ಸ್ ನೀಡುವುದು, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ ಎಂದರು.

ಮೇಕೆದಾಟು ಬಗ್ಗೆ ತಮಿಳುನಾಡು ಕ್ಯಾತೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರದ ಪಾತ್ರ ಏನಿದೆಯೋ ಅದನ್ನು ಮಾಡುತ್ತದೆ. ಪಕ್ಷ ಬೇರೆ, ಸರ್ಕಾರ ಬೇರೆಯಾದರೂ ಸರ್ಕಾರದ ಪಾತ್ರ ಏನಿರುತ್ತದೆಯೋ ಅದನ್ನು ಮಾಡುತ್ತದೆ ಎಂದು ಮಾರ್ಮಿಕವಾಗಿ ತಿಳಿಸಿದರು.

ಇನ್ನು ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಮೇಕೆದಾಟು ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಕೇಂದ್ರ ಮಟ್ಟದಲ್ಲಿ ಸಭೆ ಕರೆಯಲಾಗುವುದು ಎಂದರು.

ಜತೆಗೆ ತಮಿಳುನಾಡು ರಾಜ್ಯ ಸರ್ಕಾರ ಏನೇ ನಿರ್ಣಯ ತೆಗೆದುಕೊಳ್ಳಲಿ, ಕೇಂದ್ರ ಸರ್ಕಾರ ಏನು ನಿರ್ಧಾರ ಮಾಡಬೇಕೋ ಅದನ್ನು ಮಾಡುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ