CrimeNEWSದೇಶ-ವಿದೇಶವಿದೇಶ

ನೈಜೀರಿಯಾದ ಡ್ರಗ್ಸ್ ಪೆಡ್ಲರ್ಗಳಿಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ವಿರುದ್ಧದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾದ ಇಬ್ಬರು ಪ್ರ ಜೆಗಳನ್ನು ಮಾದಕವಸ್ತು ನಿಯಂತ್ರ ಣ ದಳ ಬಂಧಿಸಿದೆ.

ಮಂಗಳವಾರ ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದು, ಮುಂಬೈ ಮತ್ತು ನೆರೆಯ ಉಪನಗರದ ಹಲವೆಡೆ ಸೋಮವಾರ ರಾತ್ರಿ ಎನ್ಸಿಬಿಯ ಮುಂಬೈ ವಲಯ ಘಟಕವು ದಾಳಿ ನಡೆಸಿದೆ. ಈ ವೇಳೆ ನೈಜೀರಿಯಾದ ಇಬ್ಬರು ಡ್ರಗ್ ಪೆಡ್ಲರ್ಗಳಿಂದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಎನ್ಸಿಬಿಯು ಭಾನುವಾರ ಮುಂಜಾನೆ ಅರ್ಮಾನ್ ಕೊಹ್ಲಿ ಮನೆಯಲ್ಲಿ ಶೋಧ ನಡೆಸಿತ್ತು . ಆಗ ಅಧಿಕಾರಿಗಳಿಗೆ ಸಣ್ಣ ಪ್ರಮಾಣದಲ್ಲಿ ಕೊಕೇನ್ ಸಿಕ್ಕಿತ್ತು . ಈ ಹಿನ್ನೆ ಲೆಯಲ್ಲಿ ಅರ್ಮಾನ್ ಕೊಹ್ಲಿಯನ್ನು ಬಂಧಿಸಲಾಗಿತ್ತು.

ಪ್ರಕರಣದ ತನಿಖೆ ವೇಳೆ ಡ್ರಗ್ಸ್‌ನ ಮೂಲ ದಕ್ಷಿಣ ಆಫ್ರಿಕಾ ಎಂಬುದು ತಿಳಿದುಬಂದಿದೆ. ಮುಂಬೈಗೆ ಯಾವ ಮಾರ್ಗ ಮತ್ತು ಮೂಲಗಳ ಮೂಲಕ ಕೊಕೇನ್ ಅನ್ನು ತರಲಾಗಿದೆ ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದು ಆ ಅಧಿಕಾರಿ ಹೇಳಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ