ಮುಂಬೈ: ಭಾರತದಲ್ಲಿ ಅಫ್ಘಾನ್ ಮುಸ್ಲಿಂ ಪ್ರಜೆಗಳಿಗೆಆಶ್ರಯ ಕಲ್ಪಿಸಬಾರದು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್‍ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ ಎಂದರು.
ಇನ್ನು ಅಫ್ಘಾನಿಸ್ತಾನದ ಮುಸ್ಲಿಮರಿಗೆ ನಮ್ಮ ದೇಶದಲ್ಲಿ ಆಶ್ರಯ ಕಲ್ಪಿಸ ಬಾರದು. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಘ್ಘಾನಿಸ್ತಾನದಲ್ಲಿ ನೆತ್ತರಕೋಡಿ ಹರಿಸಿದ್ದು ನಾವೇ ಎಂದು ಇಸ್ಲಾಮಿಕ್ ಸ್ಟೇಟ್ ಐಎಸ್‍ಕೆಪಿ(ISKP) ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಅಮೆರಿಕ ನೇತೃತ್ವದಲ್ಲಿ ಸೇನಾ ಪಡೆಗಳ ಹಿಂತೆಗೆತ ಕಾರ್ಯಾಚರಣೆ ವೇಳೆ ಅಘ್ಘಾನಿಸ್ತಾನದಲ್ಲಿ ಏಳು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು.
ಬಳಿಕ ರಾತ್ರಿಯಿಡಿ ನೆತ್ತರು ಹರಿಸಿದ ಪಾಪಿಗಳು ನಾವು ಎಲ್ಲಾ ಭದ್ರತಾ ತಡೆಗೋಡೆಗಳನ್ನೂ ದಾಟಿ ಅಮೆರಿಕ ಭದ್ರತಾ ಪಡೆಗಳಿರುವ ಪ್ರದೇಶಕ್ಕಿಂತ 16 ಅಡಿ ದೂರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಕ್ಕೆ ಒಬ್ಬ ಬಾಂಬರ್‌ನಿಂದ ಸಾಧ್ಯವಾಗಿದೆ ಎಂದು ದಾಳಿಯ ಹೊಣೆ ಹೊತ್ತ ಐಎಸ್‍ಕೆಪಿ ಸಂಘಟನೆ ಪ್ರಚಾರ ಪಡೆದುಕೊಂಡಿದೆ.