NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಯಾವುದೇ ಚರ್ಚೆಗೆ ನನಗೆ ಅವಕಾಶ ಸಿಗಲಿಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ್ರು ಬೇಸರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮೂರು ಕೃಷಿ ಕಾನೂನು, ಬೆಲೆ ಏರಿಕೆ, ಒಬಿಸಿ ತಿದ್ದುಪಡಿ ಮಸೂದೆ, ಪೆಗಾಸಸ್ ಸೇರಿ ಹಲವು ವಿಚಾರಗಳ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಲು ಪ್ರಯತ್ನಪಟ್ಟೆ, ಆದರೆ ಯಾವುದೇ ಚರ್ಚೆಯಲ್ಲಿ ಮಾತನಾಡಲು ಅವಕಾಶ ಸಿಗಲಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗದ್ದಲಗಳ ನಡುವೆ ನಡೆಯುತ್ತಿರುವ ಕಲಾಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನನಗೆ 90 ವರ್ಷ, ವಯೋ ಸಹಜ ಸಮಸ್ಯೆಗಳ ನಡುವೆಯೂ ಒಂದೇ ಒಂದು ಕಲಾಪಕ್ಕೆ ಗೈರಾಗದೇ ಚರ್ಚೆಯಲ್ಲಿ ಭಾಗವಹಿಸಿದ್ದೆ, ಮಾತನಾಡಲು ಪ್ರಯತ್ನಪಟ್ಟೆ. ಆದರೆ ರಾಜ್ಯಸಭೆಯಲ್ಲಿ ನಮ್ಮ ಪಕ್ಷದ ಸಂಖ್ಯೆ ಕಡಿಮೆ ನಾನೊಬ್ಬನೇ ಸದಸ್ಯನಾಗಿರುವ ಕಾರಣ ಮಾತನಾಡಲು ಅವಕಾಶವೇ ಸಿಗಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕಲಾಪದಲ್ಲಿ ಯಾವುದೇ ವಿಷಯಗಳು ಚರ್ಚೆಯಾಗಿಲ್ಲ. ಚರ್ಚೆ ಮಾಡಲು ನಮ್ಮ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ. ಎಲ್ಲಾ ಪಕ್ಷಗಳ ನಾಯಕರು ಒಟ್ಟಿಗೆ ಸೇರಿ ಚರ್ಚೆ ನಡೆಸಬೇಕು. ಮುಂದಿನ ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ಮುಂದಿನ ದಿನಗಳಲ್ಲಿ ಸಿಗಬಹದು, ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ ಎಂದರು.

ಇದೇ ವೇಳೆ ಮೋದಿ ಸಂಪುಟದ ಬಗ್ಗೆ ಮಾತನಾಡಿ, ಮೊದಲ ಬಾರಿಗೆ 12 ಮಹಿಳೆಯರಿಗೆ, 8 ಎಸ್ಸಿ, 12 ಎಸ್ಟಿ ಸಮುದಾಯದ ನಾಯಕರಿಗೆ ಮೋದಿ ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ. ಆದರೆ ಅದು ಏನೇ ಇದ್ದರೂ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ ಎಂದು ತಿಳಿಸಿದರು.

ಇನ್ನು ದೇಶ ಅಭಿವೃದ್ಧಿಗೆ ಆಡಳಿತ ಪಕ್ಷ ಶ್ರಮಿಸಬೇಕು. ಆ ನಿಟ್ಟಿನಲ್ಲಿ ವಿಪಕ್ಷಗಳ ಸಲಹೆ ಸೂಚನೆಗಳನ್ನು ಆಲಿಸ ಜನರಿಗೆ ಸರಿಯಾದುದ್ದನ್ನು ಪಾಲಿಸಿ ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ