NEWSದೇಶ-ವಿದೇಶಸಿನಿಪಥ

ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿ ಕಳೆದುಕೊಂಡೆ : ಬಾಲಿವುಡ್ ನಟಿ ಕರೀನಾ ಕಪೂರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಸಂದರ್ಶನವೊಂದರಲ್ಲಿ ತಾವು ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿಯನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಕರೀನಾ ಕಫೂರ್ ಅವರ ‘ಪ್ರೆಗ್ನೆನ್ಸಿ ಬೈಬಲ್’ ಪುಸ್ತಕ ನಿನ್ನೆಯಷ್ಟೆ ರಿಲೀಸ್ ಆಯಿತು. ಪುಸ್ತಕ ಬಿಡುಗಡೆಯ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಕರೀನಾ, ಗರ್ಭಿಣಿಯಾದ ಸಂದರ್ಭದಲ್ಲಿ ತಾನು ಅನುಭವಿಸಿದ ಕಷ್ಟ, ಸಂತೋಷದ ಕುರಿತು ಮಾತನಾಡಿದರು. ಇದನ್ನೂ ಓದಿ: ಜಹಾಂಗೀರ್ ಎಂದು ಪುತ್ರನಿಗೆ ಹೆಸರಿಟ್ಟ ಕರೀನಾ

ಮಹಿಳೆ ಗರ್ಭಿಣಿಯಾದ ಸಂದರ್ಭದಲ್ಲಿ ಆಕೆಯ ಪರಿಸ್ಥಿತಿ ಬಹುತೇಕ ಮಂದಿಗೆ ಅರ್ಥ ಆಗುವುದೇ ಇಲ್ಲ. ಆಕೆಯ ತಳಮಳ, ಭಾವನೆಗಳು, ಮಾನಸಿಕ ಉದ್ವೇಗ, ಮೂಡ್ ಕ್ಷಣದಿಂದ ಕ್ಷಣಕ್ಕೆ ಬದಲಾಗುತ್ತಲೇ ಇರುತ್ತವೆ.

ಇಂಥಾ ಸಂದರ್ಭದಲ್ಲಿ ಆಕೆಯ ಜೊತೆ ಇರುವ ಪತಿ ಇದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ ಕರೀನಾ, ತಮ್ಮ ಪತಿ ಸೈಫ್ ಅಲಿ ಖಾನ್ ತುಂಬಾ ಚೆನ್ನಾಗಿ ಹೊಂದಿಕೊಂಡರು ಎಂದು ಸೈಫ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೈನಂದಿನ ಬದುಕಿನಲ್ಲಿ ದಂಪತಿ ನಡುವೆ ಸೆಕ್ಸ್ ಬಾಂಧವ್ಯದ ಕೊಂಡಿಯಾಗಿ ಬೆಸೆಯುತ್ತದೆ ನಿಜ. ಆದರೆ ಅದು ಇಬ್ಬರೂ ಸಂಗಾತಿಗಳ ಮನಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ವಿವರಿಸಿದ್ದಾರೆ.

ಇನ್ನು ಯಾರೇ ಒಬ್ಬ ಸಂಗಾತಿಗೆ ಆ ಕ್ಷಣದಲ್ಲಿ ಸೆಕ್ಸ್ ಮಾಡಲು ಆಸಕ್ತಿ ಇಲ್ಲದೇ ಹೋದಲ್ಲಿ ಮತ್ತೊಬ್ಬರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ದಾಂಪತ್ಯ ಅರ್ಥ ಪೂರ್ಣವಾಗುತ್ತದೆ. ನನ್ನ ಪುಸ್ತಕದಲ್ಲಿ ಸಾಕಷ್ಟು ವಿಚಾರಗಳನ್ನು ಬರೆದಿದ್ದೇನೆ ಎಂದು ಕರೀನಾ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ತಾನು ಗರ್ಭಿಣಿಯಾಗಿದ್ದಾಗ ಅನುಭವಿಸಿದ ಖುಷಿ ನೋವುಗಳನ್ನು ಶೇರ್‌ ಮಾಡಿಕೊಂಡಿರುವ ಕರೀನಾ  ಅವರ ಅನುಭವವನ್ನು ಪುಸ್ತಕದಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ