CrimeNEWSದೇಶ-ವಿದೇಶವಿದೇಶ

ಪೆಗಾಸಸ್ ವಿವಾದ ಆರೋಪ ನಿಜವೇ ಆಗಿದ್ದರೆ ಅದು ಗಂಭೀರವಾದದ್ದು: ಸುಪ್ರೀಂ ಕೋರ್ಟ್‌ ಅಭಿಪ್ರಾಯ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪೆಗಾಸಸ್ ವಿವಾದಕ್ಕೆ ಸಂಬಂಧಿಸಿದ ಆರೋಪ ನಿಜವೇ ಆಗಿದ್ದರೆ ನಿಜಕ್ಕೂ ಅದು ಗಂಭೀರವಾದದ್ದು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೆಗಾಸಸ್ ಸ್ಪೈವೇರ್ ಪ್ರಕರಣದ ಕುರಿತು ವಿಶೇಷ ತನಿಖೆ ನಡೆಸುವಂತೆ ಕೋರಿ ಭಾರತದ ಎಡಿಟರ್ಸ್ ಗಿಲ್ಡ್ ಸಹಿತ ಹಲವರು ಸಲ್ಲಿಸಿರುವ ಅರ್ಜಿಗಳನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಾಧ್ಯಮಗಳ ವರದಿ ಸರಿಯಾಗಿದ್ದರೆ ಆರೋಪಗಳು ಗಂಭೀರವಾಗಿದೆ ಎಂದು ಹೇಳಿದೆ.

ದೇಶದ ಪ್ರಮುಖ ವಿಪಕ್ಷದ ನಾಯಕರು, ಪತ್ರಕರ್ತರು ಹಾಗೂ ಇತರರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶದ ಮೂಲಕ ಗೂಢಚರ್ಯೆ ನಡೆಸಲಾಗುತ್ತಿದೆ ಎಂಬ ಆರೋಪ ಇದೀಗ ದೇಶವ್ಯಾಪಿ ವ್ಯಾಪಕ ಸದ್ದು ಮಾಡುತ್ತಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಭಾರತದ ಎಡಿಟರ್ಸ್ ಗಿಲ್ಡ್ ಸಹಿತ ಹಲವರು ಸೂಕ್ತ ತನಿಖೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಎಲ್ಲಾ ಅರ್ಜಿದಾರರು ತಮ್ಮ ಅರ್ಜಿಯ ಪ್ರತಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಗೆ ಕೇಂದ್ರವು ಹಾಜರಾಗಬೇಕು. ಸತ್ಯ ಹೊರಬರಬೇಕು. ಯಾರ ಹೆಸರುಗಳಿವೆ ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಮೂರ್ತಿ ಸೂರ್ಯ ಕಾಂತ್ ಒಳಗೊಂಡ ದ್ವಿಸದಸ್ಯ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು.

ಅರ್ಜಿಗಳ ವಿಚಾರಣೆ ವೇಳೆ ಎರಡು ವರ್ಷಗಳ ಬಳಿಕ ಇದಕ್ಕಿದ್ದಂತೆ ಈ ವಿಚಾರ ಎತ್ತಿದ್ದೇಕೆ? ಎಂದು ಸಿಜಿಐ ರಮಣ ಪ್ರಶ್ನಿಸಿದರು. 2019 ರಲ್ಲಿ ಪೆಗಾಸಸ್ ಪ್ರಕರಣ ಬೆಳಕಿಗೆ ಬಂದಿದ್ದು, ಯಾರೊಬ್ಬರೂ ಗೂಢಚರ್ಯೆವನ್ನು ಪರಿಶೀಲಿಸಲು ಯಾವುದೇ ಗಂಭೀರ ಪ್ರಯತ್ನವನ್ನು ಮಾಡದಿರುವುದು ಆಶ್ಚರ್ಯಕರವಾಗಿದೆ. ಹೆಚ್ಚಿನ ಅರ್ಜಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳ ಪತ್ರಿಕೆ ತುಣುಕುಗಳನ್ನು ಆಧರಿಸಿವೆ ಎಂದು ಪೀಠ ಹೇಳಿದೆ.

ಇದಕ್ಕೆ ಉತ್ತರಿಸಿದ ಕಪಿಲ್ ಸಿಬಲ್ ಅವರು, ನಾವು ವಾಷಿಂಗ್ಟನ್ ಪೋಸ್ಟ್ ವರದಿ ಹಾಗೂ ಇತರ ಮಾಧ್ಯಮ ಸಂಸ್ಥೆಗಳಿಂದ ಇದನ್ನು ತಿಳಿದುಕೊಂಡೆವು. ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶರು ಹಾಗೂ ಸುಪ್ರೀಂಕೋರ್ಟ್ ನ ರಿಜಿಸ್ಟ್ರಾರ್‌ಗಳ ಫೋನ್‌ಗಳನ್ನು ಸ್ಪೈವೇರ್ ಬಳಸಿ ತಡೆಹಿಡಿಯಲಾಗಿದೆ ಎಂದು ಇಂದು ಬೆಳಗ್ಗೆ ನಮಗೆ ತಿಳಿಸಲಾಯಿತು.

ಸ್ಪೈವೇರ್ ಅನ್ನು ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. “ಎನ್ ಎಸ್ ಒ ತಂತ್ರಜ್ಞಾನವು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೊಡಗಿಸಿಕೊಂಡಿದೆ ಎಂದು ಸಿಬಲ್ ಕೋರ್ಟ್ ಗೆ ಮಾಹಿತಿ ನೀಡಿದರು.

ವಿಶೇಷ ತನಿಖಾ ತಂಡ ರಚನೆಗೆ ಮನವಿ
ಇನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಎರಡು ದಿನಗಳ ಹಿಂದೆ ಸಲ್ಲಿಸಿದ ಅರ್ಜಿಯಲ್ಲಿ, ಸ್ಪೈವೇರ್ ಒಪ್ಪಂದದ ಬಗ್ಗೆ ಹಾಗೂ ಗುರಿಯಾಗಿರುವವರ ಪಟ್ಟಿಯ ಬಗ್ಗೆ ಸರ್ಕಾರದಿಂದ ವಿವರಗಳನ್ನು ಪಡೆಯಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಅಲ್ಲದೆ ಈ ಹಿಂದೆ, ಹಿರಿಯ ಪತ್ರಕರ್ತರಾದ ಎನ್. ರಾಮ್ ಹಾಗೂ ಶಶಿಕುಮಾರ್ ಅವರು ಗೂಢಚರ್ಯೆ ಆರೋಪದ ಬಗ್ಗೆ ತನಿಖೆಗೆ ಮಾಜಿ ನ್ಯಾಯಾಧೀಶರ ನೇತೃತ್ವದ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. ಪತ್ರಕರ್ತರ ಪರ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿಗೆ ಅರ್ಜಿಯನ್ನು ಪಟ್ಟಿ ಮಾಡುವಂತೆ ವಿನಂತಿಸಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ