NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ಕನ್ನಡದ ಹೆಸರು ಮಲಯಾಳಿ ಭಾಷೆಗೆ ಸಲ್ಲ: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆ ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ.

ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ. ಅಲ್ಲಿನ ಜನರೊಂದಿಗೆ ಕರ್ನಾಟಕ ಮತ್ತು ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ, ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ ಮತ್ತು ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ.

ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ.

ಹೀಗಾಗಿ, ಅಲ್ಲಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂಬುದು ನನ್ನ ಭಾವನೆ. ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಹೆಸರಿನ ಅರ್ಥವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿರುವ ಕೇರಳ ಸರ್ಕಾರ ಅವುಗಳ ಮೂಲ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕೆಂದು ನಾನು ಈ ಮೂಲಕ ವಿನಂತಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...