NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕ – ಕೇರಳ ರಾಜ್ಯಗಳ ನಡುವೆ ಹುಳಿ ಹಿಂಡುವ ಕುತಂತ್ರಿಗಳಿದ್ದಾರೆ: ಎಚ್‌ಡಿಕೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ವಿಜಯನ್‌ ಪಿನರಾಯಿ ಅವರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್‌ ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್‌ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟೆನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು