NEWSದೇಶ-ವಿದೇಶರಾಜಕೀಯ

ಮುಂದಿನ ಪಂಜಾಬ್ ಚುನಾವಣೆ- ಎಎಪಿಯಿಂದ ಸಿಖ್‌ ಸಮುದಾಯದವರೇ ಸಿಎಂ: ಕೇಜ್ರಿವಾಲ್ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಅಮೃತ್ ಸರ್: ಪಂಜಾಬ್ ವಿಧಾನಸಭೆ ಚುನಾವಣೆ 2022 ರಲ್ಲಿ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಚುನಾವಣೆ ಎದುರಿಸಲು ಸಜ್ಜುಗೊಂಡಿದ್ದು, ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರಲ್ಲಿ ಪಂಜಾಬ್ ನ ಕೊಟ್ಕಾಪುರ ಪೊಲೀಸ್ ಫೈರಿಂಗ್ ಪ್ರಕರಣದ ತನಿಖೆ ನಡೆಸಲು ರಚಿಸಿದ್ದ ಎಸ್ಐಟಿಯಲ್ಲಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವಾರ್ ವಿಜಯ್ ಪ್ರತಾಪ್ ಸಿಂಗ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಜ್ರಿವಾಲ್, ಪಕ್ಷದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ, ನಿರ್ಧಾರವಾದಾಗ ನಿಮಗೆ ಮಾಹಿತಿ ನೀಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ರಾಜ್ಯದಲ್ಲಿ ಈಗಿರುವ ಆಡಳಿತದಿಂದ ಜನತೆ ಬೇಸತ್ತಿದ್ದು ಹೊಸ ರೀತಿಯ ನಾಯಕತ್ವವನ್ನು ಬಯಸುತ್ತಿದ್ದಾರೆ. ಹೀಗಾಗಿ”ಇಡೀ ಪಂಜಾಬ್ ನಮ್ಮ ಸಿಎಂ ಅಭ್ಯರ್ಥಿ ಬಗ್ಗೆ ಹೆಮ್ಮೆ ಪಡಲಿದೆ, ಅವರು ಸಿಖ್ ಸಮುದಾಯದವರೇ ಆಗಿರುತ್ತಾರೆ” ಎಂದು ಕೇಜ್ರಿವಾಲ್ ಮಾರ್ಮಿಕವಾಗಿ ನುಡಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್