Friday, November 1, 2024
NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮಾನಹಾನಿಕರ ವರದಿ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧ ತಂದ ಸಚಿವ ಡಿವಿಎಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳ ವಿರುದ್ಧ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧ ತಂದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೇಂದ್ರ ಸಚಿವ ಸಂಪುಟ ಪುನಾರಚನೆಯ ಈ ಸಂದರ್ಭದಲ್ಲಿ ಕೆಲ ಪತ್ರಿಕೆ, ನ್ಯೂಸ್‌ ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂಬ ಕಾರಣ ನೀಡಿ ಡಿವಿಎಸ್‌ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ತಮ್ಮ ಅರ್ಜಿಯಲ್ಲಿ ಈ ಕೆಲ ಹಳೆಯ ದೃಷ್ಟಾಂತಗಳ ಉದಾಹರಣೆಯನ್ನೂ ಕೇಂದ್ರ ಸಚಿವರು ಉಲ್ಲೇಖಿಸಿದ್ದಾರೆ.

ಇನ್ನು ತಮ್ಮ ಬಗ್ಗೆಯೂ ಇಂತಹ ವಿಡಿಯೋ ಪ್ರಸಾರ ಮಾಡುವ ಅಪಾಯವಿದೆ. ಹಾಗಾದಲ್ಲಿ ನಮ್ಮ ಘನತೆಗೆ ಧಕ್ಕೆಯಾಗಲಿದೆ. ಚಾರಿತ್ರ್ಯ ವಧೆಯಾಗಲಿದೆ ಎಂದು ಅರ್ಜಿ ಸಲ್ಲಿಸಿದ್ದರು. ಅವರ ಆ ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.

ಇದೇ ರೀತಿ ಅರ್ಜಿ ಸಲ್ಲಿಸಿದ್ದ 6 ಸಚಿವರು
ಈ ಹಿಂದೆ ರಾಜ್ಯ ಸರ್ಕಾರದ 6 ಸಚಿವರು ಇದೇ ರೀತಿ ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಅರ್ಜಿ ಸಲ್ಲಿಸಿ ತಮ್ಮ ವಿರುದ್ಧ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್​ನಿಂದ ನಿರ್ಬಂಧ ತಂದಿದ್ದರು.

ಟ್ವೀಟ್ ಮೂಲಕ ಸಚಿವ ಸದಾನಂದಗೌಡ ಸ್ಪಷ್ಟನೆ
ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಚಿವ ಸದಾನಂದಗೌಡ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...